ಮಂಗಳವಾರ, ಜೂನ್ 28, 2022
21 °C

ಆಮ್ಲಜನಕ ದುರಂತ: 22 ಕುಟುಂಬಗಳಿಗೆ ಪರಿಹಾರ ಧನ ಪಾವತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಆಮ್ಲಜನಕ ದುರಂತದಲ್ಲಿ ಮೃತಪಟ್ಟ 24 ಮಂದಿಯ ಪೈಕಿ 22 ಜನರ ಕುಟುಂಬಸ್ರಿತಗೆ ತಲಾ ₹ 2 ಲಕ್ಷ ಪರಿಹಾರ ಧನವನ್ನು ಆರ್ಟಿಜಿಎಸ್ ಮೂಲಕ ಪಾವತಿಸಲಾಗಿದೆ.

ಮೃತಪಟ್ಟವರಲ್ಲಿ ಇಬ್ಬರು ಹಾಗೂ ಅವರ ಕಾನೂನು ಬದ್ದ ವಾರಸುದಾರರು ಬೆಂಗಳೂರು ಜಿಲ್ಲೆಗೆ ಸೇರಿದವರಾಗಿದ್ದು, ಇವರ ವಿವರಗಳು ಹಾಗೂ ದಾಖಲೆಗಳಿಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಯವರಿಂದ ವರದಿ ಕೇಳಿ ಪತ್ರ ಬರೆಯಲಾಗಿದೆ. ವರದಿ ಬಂದ ಕೂಡಲೇ ಅವರ ಕುಟುಂಬಕ್ಕೆ ಪರಿಹಾರ ಜಮೆ  ಮಾಡಲಾಗುತ್ತದೆ.

22 ಮೃತರ ವಾರಸುದಾರರಿಗೆ ಪರಿಹಾರ ಧನ ಪಾವತಿಸಿರುವ ಬಗ್ಗೆ ಅಡ್ವೊಕೇಟ್‌ ಜನರಲ್ ಅವರಿಗೆ ಮತ್ತು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು