ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19: ಆಮ್ಲಜನಕ ಪೂರೈಕೆ ಕಡತಗಳು ಪೊಲೀಸರ ವಶಕ್ಕೆ

Last Updated 6 ಮೇ 2021, 4:44 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ ರೋಗಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಬುಧವಾರ ಪೊಲೀಸರು ಜಿಲ್ಲೆಯ 5 ಕಡೆ ದಾಳಿ ನಡೆಸಿ ಕಡತಗಳ‌ನ್ನು ವಶಕ್ಕೆ ಪಡೆದಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾ ಸರ್ಜನ್, ವೈದ್ಯಕೀಯ ಕಾಲೇಜಿನ ಡೀನ್‌ ಅವರ ಕಚೇರಿಗಳ ಮೇಲೆ ದಾಳಿ ನಡೆದಿದೆ. ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಸಿ.ರವಿ ಅವರು ಕುಸಿದು ಬಿದ್ದರು. ತಕ್ಷಣವೇ ಇವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಆದರೆ, ಇದನ್ನು ನಿರಾಕರಿಸಿರುವ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯ ಸಿಬ್ಬಂದಿ, ‘ಡಾ.ರವಿ ಅವರು ಕಳೆದ ಮೂರು ದಿನಗಳಿಂದ ಒತ್ತಡದಲ್ಲಿದ್ದರು. ಸರಿಯಾಗಿ ಊಟ ಮಾಡಿರಲಿಲ್ಲ. ಇದರಿಂದ ಅವರು ಬಳಲಿ ಕುಸಿದು ಬಿದ್ದಿದ್ದು, ತಕ್ಷಣವೇ ಚೇತರಿಸಿಕೊಂಡಿದ್ದಾರೆ. ಸದ್ಯ, ಮನೆಯಲ್ಲಿ ವಿಶ್ರಾಂತಿಯಲ್ಲಿದ್ದಾರೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT