ಚಾಮರಾಜನಗರ: ಶಿವಕುಮಾರ್ ವರ್ಗ, ಪದ್ಮಿನಿ ಹೊಸ ಎಸ್‌ಪಿ

ಚಾಮರಾಜನಗರ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಟಿ.ಪಿ.ಶಿವಕುಮಾರ್ ಅವರನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ, ಅವರ ಜಾಗಕ್ಕೆ ಐಪಿಎಸ್ ಅಧಿಕಾರಿ ಪದ್ಮಿನಿ ಸಾಹೂ ಅವರನ್ನು ನಿಯೋಜಿಸಿದೆ.
2015ನೇ ಸಾಲಿನ ಒಡಿಶಾ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಪದ್ಮಿನಿ ಅವರು 2021ರಲ್ಲಿ ಕರ್ನಾಟಕ ಕೆಡೆರ್‌ಗೆ ವರ್ಗಾವಣೆಗೊಂಡಿದ್ದರು. ಸೋಮವಾರ ಸಂಜೆ ಅವರು ಅಧಿಕಾರ ಸ್ವೀಕರಿಸಿದರು. ಅವರು ಜಿಲ್ಲೆಯ ಎರಡನೇ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ. ಶಿವಕುಮಾರ್ ಅವರಿಗಿಂತಲೂ ಮೊದಲು ಕರ್ತವ್ಯದಲ್ಲಿದ್ದ ದಿವ್ಯಾ ಸಾರಾ ಥಾಮಸ್ ಅವರು ಜಿಲ್ಲೆಯ ಮೊದಲ ಮಹಿಳಾ ಎಸ್‌ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
2022ರ ಜನವರಿ 29ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಟಿ.ಪಿ.ಶಿವಕುಮಾರ್ ಅವರನ್ನು ಕೆಪಿಟಿಸಿಎಲ್‌ನ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.