ನಂಜಮ್ಮ ತಯಾರಿಸುವ ಬಿಸಿಯೂಟ ರುಚಿಯಾಗಿಲ್ಲ ಎಂದು ಕೆಲವು ಮಕ್ಕಳು ಸೇವಿಸುತ್ತಿರಲಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಪರಿಶಿಷ್ಟ ಮಹಿಳೆ ಎಂಬ ಕಾರಣಕ್ಕೆ ಊಟ ಮಾಡದಿರುವುದು ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುವುದು.
ಬಿ.ಟಿ.ಕವಿತಾ, ಎಸ್‌ಪಿ
ಶಾಲೆ ತೊರೆದವರಲ್ಲಿ 6 ವಿದ್ಯಾರ್ಥಿಗಳನ್ನು ಮರಳಿ ಶಾಲೆಗೆ ಕರೆತರಲಾಗಿದೆ. ಪೋಷಕರ ಮನವೊಲಿಸಿ ಎಲ್ಲ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲಾಗುವುದು. ಶತಮಾನದ ಹೊಸ್ತಿಲಲ್ಲಿರುವ ಶಾಲೆಯ ಅಭಿವೃದ್ಧಿಗೆ ಅನುದಾನ ನೀಡಲಾಗುವುದು.
ರಾಮಚಂದ್ರ ರಾಜೇ ಅರಸ್, ಡಿಡಿಪಿಐ
ಸಮಸ್ಯೆ ಅರಿವಿಗೆ ಬಂದರೂ ಬೇಜವಾಬ್ದಾರಿ ತೋರಿ ಪರೋಕ್ಷವಾಗಿ ಅಸ್ಪೃಶ್ಯತೆ ಆಚರಣೆಗೆ ಬೆಂಬಲ ನೀಡಿದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಅಸ್ಪೃಶ್ಯತೆ ವಿರುದ್ಧ ಗ್ರಾಮಸ್ಥರಿಗೆ ಅರಿವು ಮೂಡಿಸಬೇಕು.
ಎನ್ ನಾಗಯ್ಯ, ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ
ಚಾಮರಾಜನಗರ ತಾಲ್ಲೂಕಿನ ಹೊಮ್ಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಭೆಯಲ್ಲಿ ಡಿಡಿಪಿಐ ರಾಮಚಂದ್ರ ರಾಜೇ ಅರಸ್ ಮಾತನಾಡಿದರು