ಚಾಮರಾಜನಗರ: ಸರ್ಕಾರದ ಜೊತೆಗೆ ಸೇವಾ ಸಂಸ್ಥೆಗಳು ಕೈಜೋಡಿಸಿದರೆ ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಿ ಉಳಿಸಿ ಬೆಳಸಬಹುದು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.

ನಗರದ ಪಿಡಬ್ಲೂಡಿ ಕಾಲೊನಿಯಲ್ಲಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಬಸವ ರಾಜೇಂದ್ರ ಮೆಡಿಕಲ್ ಟ್ರಸ್ಟ್ ಸಹಯೋಗದಲ್ಲಿ ನೂತನವಾಗಿ ನಿರ್ಮಿಸಿರುವ ಶಾಲಾ ಕಟ್ಟಡ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಸರ್ಕಾರಿ ಶಾಲೆಗಳ ಉನ್ನತೀಕರಣ ಕಾರ್ಯದಲ್ಲಿ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವ ಅಗತ್ಯ. ಈ ನಿಟ್ಟಿನಲ್ಲಿ ಬಸವರಾಜೇಂದ್ರ ಟ್ರಸ್ಟ್ ಶಾಲೆಗಳ ಉನ್ನತೀಕರಣ ಕಾರ್ಯಕ್ಕೆ ನೆರವು ನೀಡುತ್ತಿರುವುದು ಶ್ಲಾಘನೀಯ’ ಎಂದರು.

‘ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳು ತೀರಾ ದುಸ್ಥಿತಿಯಲ್ಲಿದ್ದು ಹಳೆಯ ಕಟ್ಟಡಗಳನ್ನು ಕೆಡವಿ ಹೊಸ ಕಟ್ಟಡಗಳನ್ನು ಕಟ್ಟಬೇಕಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ಒಂದು ಶಾಲೆಯ ದುರಸ್ತಿಗೆ ಕನಿಷ್ಠ ₹ 5 ರಿಂದ ₹ 10 ಲಕ್ಷ ಅಗತ್ಯವಿದ್ದು, ಜಿಲ್ಲಾ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಸಂಪನ್ಮೂಲಗಳಿಂದ ಭರಿಸುವುದು ಆರ್ಥಿಕವಾಗಿ ಹೊರೆಯಾಗಿದೆ. ಶಾಲಾ ಕಟ್ಟಡಗಳ ದುರಸ್ತಿ ಹಾಗೂ ನಿರ್ಮಾಣಕ್ಕೆ ಸರ್ಕಾರದ ವಿಶೇಷ ಅನುದಾನದ ಅಗತ್ಯವಿದೆ’ ಎಂದರು.

ಜಿಲ್ಲೆಯ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಾರ್ಪೊರೆಟ್ ಸಂಸ್ಥೆಗಳು ಉದಾರವಾಗಿ ಸಿಎಸ್ಆರ್ ನಿಧಿ ನೀಡಬೇಕು. ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯಗಳ ನಿರ್ಮಾಣ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದರು.

ಸಾಮಾಜಿಕ ಹಾಗೂ ಆರ್ಥಿಕ ಕಾರಣಗಳಿಂದ ಚಾಮರಾಜನಗರ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ್ದು ಶಿಕ್ಷಕರು ಶಿಕ್ಷಣ ಕ್ಷೇತ್ರದ ಬೆಳವಣಿಗೆ ಹೆಚ್ಚು ಶ್ರಮವಹಿಸಬೇಕು. ಜಿಲ್ಲೆಯ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಫಲಿತಾಂಶ ಸುಧಾರಣೆಯಾಗಬೇಕು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಸರ್ಕಾರ ಶಿಕ್ಷಕರ ಕೊರತೆ ನೀಗಿಸುವಲ್ಲಿ ಕ್ರಮ ಕೈಗೊಳ್ಳಲಿದೆ ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದರು.

ಡಿಡಿಪಿಐ ರಾಮಚಂದ್ರರಾಜೇ ಅರಸ್ ಮಾತನಾಡಿ ‘ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2021-22ನೇ ಸಾಲಿನಲ್ಲಿ 62 ಮಕ್ಕಳು ಓದುತ್ತಿದ್ದರು. 2022-23ರಲ್ಲಿ 119, 2023-24ರಲ್ಲಿ 210, 2025-26ನೇ ಸಾಲಿನಲ್ಲಿ 320 ಮಕ್ಕಳ ದಾಖಲಾತಿ ನಡೆದಿದೆ. ಹಿಂದೆ 1 ರಿಂದ 8ನೇ ತರಗತಿಯವರೆಗೆ ಶಿಕ್ಷಣ ಸಿಗುತ್ತಿತ್ತು. ಇದೀಗ ಎಲ್.ಕೆ.ಜಿ ಯಿಂದ 9ನೇ ತರಗತಿಯವರೆಗೆ ವಿಸ್ತರಿಸಲಾಗಿದೆ. ಮುಂದಿನ ಶೈಕ್ಷಣಿಕ ಸಾಲಿಗೆ 10ನೇ ತರಗತಿಯವರೆಗೆ ವಿಸ್ತರಿಸಲಾಗುವುದು. ಬಸವ ರಾಜೇಂದ್ರ ಮೆಡಿಕಲ್ ಟ್ರಸ್ಟ್ ಶಾಲೆಗೆ 8 ಕೊಠಡಿ, ಐವರು ಶಿಕ್ಷಕರು, ಶಾಲಾ ವಾಹನ, ಬೋರ್ವೆಲ್, ಪಿಠೋಪಕರಣ, ಪುಸ್ತಕ, ಸಮವಸ್ತ್ರ ಹಾಗೂ ಕಂಪ್ಯೂಟರ್ ಕೊಡುಗೆ ನೀಡಿದೆ. ಈ ಶಾಲೆ ಜಿಲ್ಲೆಗೆ ಆದರ್ಶ ಶಾಲೆಯಾಗಲಿದೆ’ ಎಂದು ಡಿಡಿಪಿಐ ವಿಶ್ವಾಸ ವ್ಯಕ್ತಪಡಿಸಿದರು.

ಬಸವ ರಾಜೇಂದ್ರ ಮೆಡಿಕಲ್ ಟ್ರಸ್ಟ್ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಬಸವರಾಜೇಂದ್ರ ಮಾತನಾಡಿ, ‘ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಮಾತೃಭಾಷೆ ಕಲಿಕೆಯ ಜೊತೆಗೆ ಇಂಗ್ಲಿಷ್ ಭಾಷೆಯ ಶಿಕ್ಷಣದ ಅವಶ್ಯಕತೆ ಇದೆ. ವೃತ್ತಿಪರ ಶಿಕ್ಷಣದ ಸೌಲಭ್ಯಗಳು ದೊರೆತರೆ ಸ್ವಉದ್ಯೋಗದ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬಹುದು. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಶಿಕ್ಷಣ ಕಲಿಕೆಗೆ ಮಕ್ಕಳಿಗೆ ಅವಕಾಶ ಕಲ್ಪಿಸಬೇಕು’ ಎಂದರು.

ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ನಗರಸಭೆ ಸದಸ್ಯೆ ಕುಮುದಾ ಕೇಶವಮೂರ್ತಿ, ಎಂ.ಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೋಮನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷೆ ಎಸ್.ಉಮಾ, ಮುಖ್ಯ ಶಿಕ್ಷಕಿ ಮಾಲಿನಿ ಕಾರ್ಯಕ್ರಮದಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.