ಪ್ರಾಧಿಕಾರದ ಕಾರ್ಯದರ್ಶಿ ರಘು ಮಾತನಾಡಿ,‘ಪ್ರತಿಯೊಬ್ಬರ ಜೀವನದಲ್ಲಿಯೂ ಗುರುವಿನ ಸ್ಥಾನ ಬಹುದೊಡ್ಡದು. ಗುರುವಿನ ಮಾರ್ಗದರ್ಶನವಿದ್ದರೆ ಮಾತ್ರ ಆ ವ್ಯಕ್ತಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ. ಸಾಲೂರು ಮಠ ಪ್ರಾರಂಭವಾದಾಗಿನಿಂದಲೂ ಇಲ್ಲಿಯವರೆಗೆ ಶೈಕ್ಷಣಿಕವಾಗಿ ಅಪಾರ ಕೊಡುಗೆ ನೀಡುತ್ತಾ ಬಂದಿದೆ. ಹಲವು ಬಡ ಕುಟುಂಬಗಳ ಜೀವನಕ್ಕೆ ಮುನ್ನುಡಿ ಬರೆದ ಮಠ. ಈ ಕ್ಷೇತ್ರಕ್ಕೆ ಬರುವ ಭಕ್ತರಿಗೆ ದಾಸೋಹ ಸೇವೆ ನೀಡುವುದರ ಜೊತೆಗೆ ಕರ್ನಾಟಕ, ತಮಿಳುನಾಡು ಸೇರಿ ಹಲವು ಭಾಗಗಳಲ್ಲಿ ಹೆಸರುವಾಸಿಯಾಗಿದೆ. ಮುಂದೆಯೂ ಇದೇ ರೀತಿ ಶ್ರೀ ಮಠವು ಕಾರ್ಯೋನ್ಮುಕವಾಗಿರಲಿ’ ಎಂದು ತಿಳಿಸಿದರು.