ಸೋಮವಾರ, ಸೆಪ್ಟೆಂಬರ್ 27, 2021
25 °C

ಚಾಮರಾಜನಗರ: ಪಿಂಚಣಿ ಅದಾಲತ್‌ ಸದುಪಯೋಗಕ್ಕೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚೇಳೂರು: ‘ಜಿಲ್ಲಾಡಳಿತದ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಅಂಗವಾಗಿ ಪಾಳ್ಯಕೆರೆ ಗ್ರಾಮ ಲೆಕ್ಕಾಧಿಕಾರಿ ಎನ್. ರಮಾನಂದ್ ಹಾಗೂ ಗ್ರಾಮ ಸಹಾಯಕಿ ಲಕ್ಷ್ಮೀದೇವಮ್ಮ ಅವರು ತಾಲ್ಲೂಕಿನ ಅಬ್ಬರವಾರಪಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು.

ಗ್ರಾಮ ಲೆಕ್ಕಾಧಿಕಾರಿ ರಮಾನಂದ್ ಮಾತನಾಡಿ, ಜಿಲ್ಲಾಧಿಕಾರಿ ಅವರ ಆದೇಶದಂತೆ ಪಿಂಚಣಿ ಅದಾಲತ್‌ ಹಮ್ಮಿಕೊಳ್ಳಲಾಗಿದೆ. ಜನರ ಬಳಿಗೆ ಹೋಗಿ ನಾಡ ಕಚೇರಿ, ಇತರೆ ಕಚೇರಿಗಳಿಗೆ ಅವರು ಅಲೆದಾಡುವುದನ್ನು ತಪ್ಪಿಸಲು ಕ್ರಮವಹಿಸಲಾಗಿದೆ. ಮನೆ ಬಾಗಿಲಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಅರ್ಜಿ ಸ್ವೀಕರಿಸಿ ಪಿಂಚಣಿ ಮಂಜೂರು ಮಾಡುವ ವಿನೂತನ ಯೋಜನೆಯನ್ನು ಜಿಲ್ಲಾಡಳಿತ ಜಾರಿಗೊಳಿಸಿದೆ. ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಕೊರೊನಾ ಮೂರನೇ ಅಲೆ ತಡೆಯಲು ಜನರು ಸಹಕರಿಸಬೇಕು. ಎಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಬೇಕು ಎಂದು ಕಂದಾಯ ಇಲಾಖೆ ಅಧಿಕಾರಿಗಳು ಸಲಹೆ ನೀಡಿದರು.

ಪಾಳ್ಯಕರೆ ಗ್ರಾ.ಪಂ ಮಾಜಿ ಸದಸ್ಯ ನಾಗಪ್ಪ, ವಿ. ವಿನಯ್‍ಕಮಾರ್ (ಬಾಬು) ಹಾಜರಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.