ಬುಧವಾರ, ಮಾರ್ಚ್ 22, 2023
32 °C

ಚಾಮರಾಜನಗರ: ಜಿಲ್ಲೆಯಾದ್ಯಂತ ಗಣೇಶನ ಹಬ್ಬದ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಜಿಲ್ಲೆಯಾದ್ಯಂತ ಜನರು ಸಂಭ್ರಮ, ಸಡಗರದ ಗಣೇಶ ಹಬ್ಬ ಆಚರಿಸುತ್ತಿದ್ದಾರೆ.

ಮಂಗಳವಾರ ರಾತ್ರಿಯಿಂದ ಜಿಲ್ಲೆಯಲ್ಲಿ ಮಳೆಯಾಗಿಲ್ಲ. ಬುಧವಾರ ಬೆಳಗ್ಗೆಯಿಂದಲೂ ಬಿಸಿಲಿನ ವಾತಾವರಣ ಇದೆ. ಹಾಗಾಗಿ, ಹಬ್ಬದ ಸಂಭ್ರಮ‌ ಮೇರೆ ಮೀರಿದೆ.

ಮನೆ‌ ಮನೆಗಳಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಜನರು ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು.

ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ವಿವಿಧ ಸಂಘ ಸಂಸ್ಥೆಗಳು ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಿವೆ. ನಗರ, ಪಟ್ಟಣಗಳ ಬಡಾವಣೆಗಳು, ಗ್ರಾಮೀಣ ಭಾಗಗಳಲ್ಲೂ ಹಬ್ಬದ ಸಡಗರ ಕಂಡು ಬರುತ್ತಿದೆ.

ಗಣಪತಿ ಪ್ರತಿಷ್ಠಾಪನೆ: ಚಾಮರಾಜನಗರದ ವಿದ್ಯಾಗಣಪತಿ ಮಂಡಳಿ ವತಿಯಿಂದ 60ನೇ ವರ್ಷದ ಗಣೇಶೋತ್ಸವ ಹಮ್ಮಿಕೊಂಡಿದ್ದು, ನಗರದ ರಥದ ಬೀದಿಯಲ್ಲಿ ಧರ್ಮ ರಕ್ಷಾ ಗಣಪತಿಯ ಪ್ರತಿಷ್ಠಾಪನಾ ಕಾರ್ಯ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಮಹದೇಶ್ವರ ಬೆಟ್ಟ: ಮಹದೇಶ್ವರ ಬೆಟ್ಟದ ವಿನಾಯಕ ಗೆಳೆಯರ ಬಳಗದ ವತಿಯಿಂದ ಆರನೇ ವರ್ಷದ ಗಣೇಶ ಪ್ರತಿಷ್ಠಾಪನಾ ಕಾರ್ಯಕ್ರಮ ಬೆಟ್ಟದ ಬಸ್ ನಿಲ್ದಾಣದ ಬಳಿ ನಡೆಯಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು