ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂಜನಗೂಡು ಕಾರ್ಖಾನೆಯ 31 ಉದ್ಯೋಗಿಗಳು ನಿಗಾ ಘಟಕದಲ್ಲಿ

Last Updated 28 ಮಾರ್ಚ್ 2020, 15:03 IST
ಅಕ್ಷರ ಗಾತ್ರ

ಚಾಮರಾಜನಗರ: ಮೈಸೂರಿನಲ್ಲಿ ಕೊರೊನಾ ವೈರಸ್‌ ಸೋಂಕು ದೃಢಪಟ್ಟ ವ್ಯಕ್ತಿ ಕೆಲಸ ಮಾಡುತ್ತಿದ್ದ ನಂಜನಗೂಡಿನಲ್ಲಿ ಕಾರ್ಖಾನೆಯಲ್ಲಿ ಕೆಲಸದಲ್ಲಿದ್ದ ಜಿಲ್ಲೆಯ 31 ಜನರ ಆರೋಗ್ಯದ ಮೇಲೆ ಜಿಲ್ಲಾಡಳಿತ ನಿಗಾ ಇಟ್ಟಿದೆ.

ಇವರನ್ನೆಲ್ಲ ಅಂಬೇಡ್ಕರ್‌ ಭವನದಲ್ಲಿ ಸ್ಥಾಪಿಸಲಾಗಿರುವ ವಿಶೇಷ ನಿಗಾ ಘಟಕದಲ್ಲಿ ಇರಿಸಲಾಗಿದೆ. ಶುಕ್ರವಾರ 19 ಜನರನ್ನು ಇಲ್ಲಿಗೆ ಕರೆದುಕೊಂಡು ಬರಲಾಗಿತ್ತು. ಶನಿವಾರ ಈ ಸಂಖ್ಯೆ 31ಕ್ಕೆ ಏರಿದೆ. ಇವರ ಜೊತೆಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರನ್ನೂ ಘಟಕದಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ.

‘ಯಾರಲ್ಲೂ ಸೋಂಕಿನ ರೋಗ ಲಕ್ಷಣಗಳಿಲ್ಲ. ಆತಂಕ ಪಡಬೇಕಾಗಿಲ್ಲ’ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶನಿವಾರ ವ್ಯಕ್ತಿಯೊಬ್ಬರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT