ಮಂಗಳವಾರ, ಸೆಪ್ಟೆಂಬರ್ 21, 2021
29 °C

ಒಲಿಂಪಿಕ್ಸ್‌: ಶುಭ ಕೋರಲು ಫೋಟೊ ಬೂತ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಪಾನಿನ ಟೋಕಿಯೊದಲ್ಲಿ ನಡೆಯುತ್ತಿರುವ 32ನೇ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿರುವ ದೇಶದ ಕ್ರೀಡಾಳುಗಳನ್ನು ಹುರಿದುಂಬಿಸುವುದಕ್ಕಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಶುಭಕೋರುವ ಫೋಟೋ ಬೂತ್ ಸ್ಥಾಪಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾ ಅಧಿಕಾರಿ ಹರ್ಷಲ್ ಭೊಯರ್ ನಾರಾಯಣ ರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ ಸೇರಿದಂತೆ ಹಲವು ಅಧಿಕಾರಿಗಳು ಫೋಟೋ ಬೂತ್‌ನಲ್ಲಿ ನಿಂತು ಭಾರತವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಶುಭ ಕೋರಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಎಚ್.ಎಸ್.ಗಂಗಾಧರ್ ಅವರು ಮಾತನಾಡಿ ‘ಒಲಿಂಪಿಕ್ಸ್‌ನಲ್ಲಿ ಈ ಬಾರಿ ಭಾರತದ ಪರವಾಗಿ ಹಲವು ವಿಭಾಗಗಳಲ್ಲಿ ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ದೇಶಕ್ಕೆ ಹೆಚ್ಚು ಪದಕ ಗೆದ್ದು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕಿ ಹಾರಿಸುವಂತಾಗಲಿ. ಕ್ರೀಡಾಪಟುಗಳಿಗೆ ಶುಭ ಹಾರೈಸಿ ಉತ್ತೇಜಿಸುವ ಉದ್ದೇಶದಿಂದ ಫೋಟೊ ಬೂತ್ ಸ್ಥಾಪಿಸಲಾಗಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು