ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಆನೆ ರಕ್ಷಣೆ; ಮೋದಿ ಮೆಚ್ಚುಗೆ

Last Updated 18 ಫೆಬ್ರುವರಿ 2023, 5:20 IST
ಅಕ್ಷರ ಗಾತ್ರ

ಚಾಮರಾಜನಗರ: ಇದೇ 14ರಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಓಂಕಾರ ವಲಯ ವ್ಯಾಪ್ತಿಯ ಖಾಸಗಿ ಜಮೀನಿನಲ್ಲಿ ವಿದ್ಯುತ್ ಆಘಾತದಿಂದ ಅಸ್ವಸ್ಥಗೊಂಡಿದ್ದ ಹೆಣ್ಣು ಕಾಡಾನೆಗೆ ಚಿಕಿತ್ಸೆಗೆ‌ ನೀಡಿ, ಅದನ್ನು ರಕ್ಷಿಸಿದ ಬಂಡೀಪುರದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆನೆ ರಕ್ಷಣೆ ಕಾರ್ಯಾಚರಣೆಯ ವಿಡಿಯೊ ಮತ್ತು ಫೋಟೊಗಳನ್ನು ಶನಿವಾರ ರಾತ್ರಿ ಟ್ವೀಟ್ ಮಾಡಿರುವ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಯ ಕ್ಷಿಪ್ರ ಪ್ರಯತ್ನದಿಂದ ಜೀವನ್ಮರಣ ಸ್ಥಿತಿಯಲ್ಲಿದ್ದ ಆನೆಯ ಜೀವವನ್ನು ಉಳಿಸಲು ಸಾಧ್ಯವಾಗಿರುವುದಕ್ಕೆ ಸಂತಸವಾಗಿದೆ. ಹೆಣ್ಣಾನೆಯನ್ನು ವಾಪಸ್ ಕಾಡಿಗೆ ಬಿಡಲಾಗಿದ್ದು, ಅದರ ಮೇಲೆ ನಿಗಾ ಇಡಲಾಗಿದೆ. ನಮ್ಮ ಅರಣ್ಯದ ಮುಂಚೂಣಿ ನೌಕರರು ನಮ್ಮ ಹೆಮ್ಮೆ ಎಂದು ಹೇಳಿದ್ದಾರೆ.

ಶನಿವಾರ ಬೆಳಿಗ್ಗೆ ಪ್ರಧಾನಿ ಮೋದಿ ಅವರು ಸಚಿವರ ಟ್ವೀಟ್ ಹಂಚಿಕೊಂಡು, ಬಂಡೀಪುರ ಸಿಬ್ಬಂದಿ ಕಾರ್ಯವನ್ನು ಶ್ಲಾಘಿಸಿದ್ದಾರೆ.

'ಇದನ್ನು ನೋಡಿ ಸಂತೋಷವಾಯಿತು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಗೆ ಅಭಿನಂದನೆಗಳು. ನಮ್ಮ ಜನರಲ್ಲಿ ಇಂತಹ ಸಹಾನುಭೂತಿ ಇರುವುದು ಶ್ಲಾಘನೀಯ' ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ತಂತಿ ಬೇಲಿಯನ್ನು ಸ್ಪರ್ಶಿಸಿದ್ದ 25ರಿಂದ 30 ವರ್ಷದ ಹೆಣ್ಣಾನೆ ತೀವ್ರ ನಿತ್ರಾಣಗೊಂಡು ಅಸ್ವಸ್ಥಗೊಂಡಿತ್ತು. ಬಂಡೀಪುರದ ಪಶುವೈದ್ಯರು ಹಾಗೂ ಅಧಿಕಾರಿಗಳು, ಸಿಬ್ಬಂದಿ ಪ್ರಯತ್ನದಿಂದ ಆನೆ ಚೇತರಿಸಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT