ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರೊಬ್ಬರಿಂದ ಲೈಂಗಿಕ ದೌರ್ಜನ್ಯ: ಸಂತ್ರಸ್ತ ಬಾಲಕನಿಗೆ ₹1 ಲಕ್ಷ ಪರಿಹಾರ

Published 17 ಏಪ್ರಿಲ್ 2024, 14:41 IST
Last Updated 17 ಏಪ್ರಿಲ್ 2024, 14:41 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ಚಾಮರಾಜನಗರ: ಯಳಂದೂರು ತಾಲ್ಲೂಕಿನ ಶಾಲೆಯೊಂದರ ಹಾಸ್ಟೆಲ್‌ನಲ್ಲಿ ಶಿಕ್ಷಕರೊಬ್ಬರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಬಾಲಕನಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ₹1 ಲಕ್ಷ ಪರಿಹಾರ ನೀಡಲಾಗಿದೆ.

ಪೋಕ್ಸೊ ಪ್ರಕರಣದ ಸಂತ್ರಸ್ತರಿಗೆ ಇಲಾಖೆಯಿಂದ ಪರಿಹಾರ ನೀಡುವ ಸೌಲಭ್ಯ ಇದ್ದು, ಬಾಲಕನ ಕುಟುಂಬಕ್ಕೆ ಚೆಕ್‌ ಹಸ್ತಾಂತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ‘ಪ್ರಜಾವಾಣಿ’ಗೆ ತಿಳಿಸಿದರು.

ರಾಜ್ಯದಲ್ಲೇ ಮೊದಲು: ‘ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತನಾದ ಬಾಲಕನಿಗೆ ಪರಿಹಾರ ನೀಡಿದ ಪ್ರಕರಣ ಇದು ರಾಜ್ಯದಲ್ಲೇ ಮೊದಲು’ ಎಂದು ಮೈಸೂರಿನ ಒಡನಾಡಿ ಸಂಸ್ಥೆಯ ನಿರ್ದೇಶಕ ಪರಶುರಾಮ್‌ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

‌ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದ ಬಾಲಕನ ಮೇಲೆ ಶಾಲೆಯ ಶಿಕ್ಷಕ ಲೈಂಗಿಕ ದೌರ್ಜನ್ಯ ಎಸಗಿದ್ದರು. ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಶಿಕ್ಷಕನನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT