ಬುಧವಾರ, ನವೆಂಬರ್ 25, 2020
24 °C

ಅತ್ಯಾಚಾರ ಆರೋಪ; ಪೊಲೀಸ್‌ ಕಾನ್‌ಸ್ಟೆಬಲ್‌ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಅತ್ಯಾಚಾರ ನಡೆಸಿರುವ ಆರೋಪದ ಅಡಿಯಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬರನ್ನು ನಗರದ ರಾಮಸಮುದ್ರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ತಾಲ್ಲೂಕಿನ ಸಂತೇಮರಹಳ್ಳಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಸಾದ್‌ ಅವರು ಬಂಧಿತ ಕಾನ್‌ಸ್ಟೆಬಲ್‌. ‘ಯುವತಿಯೊಬ್ಬರು ಸೋಮವಾರ ಅತ್ಯಾಚಾರದ ದೂರು ನೀಡಿದ್ದರು. ಅದರ ಆಧಾರದಲ್ಲಿ ಎಫ್‌ಐಆರ್‌ ದಾಖಲಿಸಿ ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ’ ಎಂದು ಠಾಣೆ ಸಬ್‌ ಇನ್‌ಸ್ಪೆಕ್ಟರ್‌ ರವಿಕುಮಾರ್‌ ಅವರು ‘ಪ್ರಜಾವಾಣಿ’ಗೆ ತಿಳಿಸಿದರು. 

ಪ್ರಸಾದ್‌ ಅವರು ತಾಲ್ಲೂಕಿನ ಇರಸವಾಡಿ ಸುತ್ತೂರಿನವರು. ದೂರು ಕೊಟ್ಟ ಯುವತಿ ಹಾಗೂ ಪ್ರಸಾದ್‌ ಅವರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಗೊತ್ತಾಗಿದೆ. ದೈಹಿಕ ಸಂಬಂಧವನ್ನೂ ಹೊಂದಿದ್ದರು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಪ್ರಸಾದ್‌ ಅವರು ಕೆಲವು ತಿಂಗಳ ಕಾನ್‌ಸ್ಟೆಬಲ್‌ ಆಗಿ ನೇಮಕಗೊಂಡಿದ್ದರು. ಆ ಬಳಿಕ ಯುವತಿಯಿಂದ ದೂರವಾಗಿದ್ದರು ಎನ್ನಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು