ಶುಕ್ರವಾರ, ಮೇ 27, 2022
23 °C

ಸಂತೇಮರಹಳ್ಳಿ: ಬೈಕ್–ಕಾರು ಡಿಕ್ಕಿ, ಪೊಲೀಸ್ ಕಾನ್‌ಸ್ಟೆಬಲ್‌ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಂತೇಮರಹಳ್ಳಿ: ಸಮೀಪದ ರಾಷ್ಟ್ರೀಯ ಹೆದ್ದಾರಿ 209ರ ಹುಲ್ಲೇಪುರ ಕ್ರಾಸ್ ಬಳಿ ಸೋಮವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಪೊಲೀಸ್ ಕಾನ್‌ಸ್ಟೆಬಲ್‌ ಮೃತಪಟ್ಟಿದ್ದಾರೆ. ಎಎಸ್ಐ ಗಾಯಗೊಂಡಿದ್ದಾರೆ.

ಸಂತೇಮರಹಳ್ಳಿ ಠಾಣೆಯ ಕಾನ್‌ಸ್ಟೆಬಲ್‌, ತಾಲ್ಲೂಕಿನ ಪ್ರಸಾದ್ (33) ಮೃತಪಟ್ಟವರು. ಅದೇ ಠಾಣೆಯ ಎಎಸ್‌ಐ ರಾಜು ಅವರಿಗೆ ಗಂಭೀರ ಗಾಯಗಳಾಗಿದ್ದು, ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ರಾತ್ರಿ 10 ಗಂಟೆಗೆ ಅಪಘಾತ ಸಂಭವಿಸಿದೆ.

ರಾಜು ಹಾಗೂ ಪ್ರಸಾದ್ ಅವರು ರಾತ್ರಿ 10.45 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಹಿಂದಿನಿಂದ ಬಂದ ಕಾರು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಪ್ರಸಾದ್ ಅವರು ಮೃತಪಟ್ಟರೆ, ಗಾಯಗೊಂಡಿದ್ದ  ಎಎಸ್‌ಐ ರಾಜು ಅವರು ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಕಾರು ಚಾಲಕ ಸತೀಶ್ ಕುಮಾರ್ ಎಂಬುವವರ ವಿರುದ್ಧ  ಚಾಮರಾಜನಗರ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು