ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ | ಮನೆಯಿಂದ ಮತದಾನ: 1.072 ಮಂದಿ ಹಕ್ಕುಚಲಾವಣೆ

Published 14 ಏಪ್ರಿಲ್ 2024, 4:46 IST
Last Updated 14 ಏಪ್ರಿಲ್ 2024, 4:46 IST
ಅಕ್ಷರ ಗಾತ್ರ

ಚಾಮರಾಜನಗರ: 85 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಶನಿವಾರದಿಂದ ಅವಕಾಶ ಕಲ್ಪಿಸಲಾಗಿದ್ದು, ಮೊದಲ ದಿನ ಕ್ಷೇತ್ರ ವ್ಯಾಪ್ತಿಯಲ್ಲಿ 1072 ಮಂದಿ ಹಕ್ಕು ಚಲಾಯಿಸಿದ್ದಾರೆ. 

ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 85 ವರ್ಷಕ್ಕಿಂತ ಹೆಚ್ಚು ವಯಸ್ಸಿನ 982 ಮತ್ತು 445 ಅಂಗವಿಕಲರು ಸೇರಿದಂತೆ 1,427 ಮಂದಿ ಮತದಾರರನ್ನು ಗುರುತಿಸಲಾಗಿದ್ದು, ಶನಿವಾರ 713 ಮಂದಿ ವೃದ್ಧರು ಮತ್ತು 359 ಮಂದಿ ಅಂಗವಿಕಲರು ತಮ್ಮ ಮನೆಗಳಿಂದಲೇ ಮತ ಚಲಾಯಿಸಿದ್ದಾರೆ. 

ಎಚ್‌.ಡಿ.ಕೋಟೆ ಕ್ಷೇತ್ರದಲ್ಲಿ 69, ನಂಜನಗೂಡಿನಲ್ಲಿ 233, ವರುಣದಲ್ಲಿ 203, ಚಾಮರಾಜನಗರದಲ್ಲಿ 85, ಗುಂಡ್ಲುಪೇಟೆಯಲ್ಲಿ 209, ಹನೂರಿನಲ್ಲಿ 168 ಮತ್ತು ಕೊಳ್ಳೇಗಾಲ ಕ್ಷೇತ್ರದಲ್ಲಿ 168 ಮಂದಿ ಮತದಾನ ಮಾಡಿದ್ದಾರೆ. 

ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿ ಮತದಾರರ ಮನೆಗಳಿಗೆ ಭೇಟಿ ನೀಡಿ, ಅಂಚೆ ಮತದಾನಕ್ಕೆ ಅವಕಾಶ ಮಾಡಿಕೊಟ್ಟರು.

ಇದೇ 18ರವರೆಗೆ ಅಂಚೆ ಮತದಾನಕ್ಕೆ ಅವಕಾಶ ಇದೆ. 

ಅಧಿಕಾರಿಗಳ ಭೇಟಿ ಪರಿಶೀಲನೆ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಪಿ.ಸಿ. ಮೀನಾ ಅವರು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ನಾಗ್ ಅವರು ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಹಿರಿಯ ನಾಗರಿಕರ ಮನೆಗಳಿಗೆ ಭೇಟಿ ನೀಡಿ ಮತದಾನ ಪ್ರಕ್ರಿಯೆಯನ್ನು ಪರಿಶೀಲಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT