ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಕ್ಷಣದೊಂದಿಗೆ ಸಂಸ್ಕಾರವನ್ನೂ ಕಲಿಯಿರಿ: ವಿರಕ್ತಮಠದ ಸರ್ಪಭೂಷಣಸ್ವಾಮೀಜಿ

Published 28 ಜನವರಿ 2024, 5:48 IST
Last Updated 28 ಜನವರಿ 2024, 5:48 IST
ಅಕ್ಷರ ಗಾತ್ರ

ಚಾಮರಾಜನಗರ: ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರ ಜೊತೆಗೆ ಸಂಸ್ಕಾರ ಕಲಿತು ಧರ್ಮದ ಬಗ್ಗೆ ಜಾಗೃತರಾಗಿ ಪ್ರಗತಿಯತ್ತ ಮುನ್ನಡೆಯಬೇಕು ಎಂದು ಹರವೆ ವಿರಕ್ತಮಠದ ಸರ್ಪಭೂಷಣಸ್ವಾಮೀಜಿ ಶನಿವಾರ ತಿಳಿಸಿದರು.

ನಗರದ ಶ್ರೀ ಬಸವರಾಜಸ್ವಾಮಿಗಳ ಅನುಭವ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಡಾ.ರಾಜೇಂದ್ರಸ್ವಾಮಿಗಳು, ಅನಗಲ್ ಶ್ರೀ ಶಿವಕುಮಾರಸ್ವಾಮಿಗಳ ಜಯಂತ್ಯುತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಜಗಜ್ಯೋತಿ ಬಸವೇಶ್ವರರು ಸ್ಥಾಪನೆ ಮಾಡಿದ ಲಿಂಗಾಯತ ವೀರಶೈವ ಧರ್ಮವು ಇತ್ತಿಚಿನ ದಿನಗಳಲ್ಲಿ ಅರಿವಿನ ಕೊರತೆಯಿಂದ ಹಿನ್ನಡೆಯಾಗುತ್ತಿದೆ. 12ನೇ ಶತಮಾನದಲ್ಲಿ ಭಕ್ತಿ ಭಂಡಾರಿ ಬಸವಣ್ಣ ಹಾಗೂ ಶರಣರು ನಮಗಾಗಿ ಲಿಂಗಾವಂತ ಧರ್ಮವನ್ನು ನೀಡಿದ್ದಾರೆ. ಅದರ ಅಚಾರ, ವಿಚಾರಗಳು ಸಹ ನಮ್ಮ ಅಭಿವೃದ್ದಿಗೆ ಪೂರಕವಾಗಿದೆ’ ಎಂದರು.

‘ನಮ್ಮ ಧರ್ಮದ ಬಗ್ಗೆ ತಾತ್ಸಾರ ಮನೋಭಾವನೆ ಸಲ್ಲದು. ನಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಜೊತೆಗೆ ಧರ್ಮದ ಬಗ್ಗೆ ಜಾಗೃತಿ ಮೂಡಿಸಿ, ನಮ್ಮ ಸಮಾಜದ ಬಗ್ಗೆ ಹೆಮ್ಮೆ ಬರುವಂತೆ ಮಾಡಬೇಕು. ವಿದ್ಯಾರ್ಥಿಗಳು ಶಿಕ್ಷಣ ಪಡೆದರೆ ಸಾಲದು, ಧರ್ಮ ಜಾಗೃತಿ ಬೆಳೆಸಿಕೊಳ್ಳಬೇಕು. ನಮ್ಮ ತಂದೆ ತಾಯಿಗಳ ಮಾತಿಗೆ ಬೆಲೆ ಕೊಡುವ ಜೊತೆ ಅವರನ್ನು ಸುಖವಾಗಿಡುವ ಪ್ರಯತ್ನ ಮಾಡಬೇಕು’ ಎಂದರು. 

ಮರಿಯಾಲ ಮಠದ ಇಮ್ಮಡಿ ಮುರುಘರಾಜೇಂದ್ರಸ್ವಾಮೀಜಿ ಮಾತನಾಡಿ, ‘ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾವು ಮಕ್ಕಳ ಸಾಧನೆಯನ್ನು ನೋಡಿ ಪ್ರೋತ್ಸಾಹಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಇಂಥ ಧರ್ಮದ ಬಗ್ಗೆ ಎಲ್ಲರೂ ಋಣಿಗಳಾಗಿರಬೇಕು. ಇತರರಿಗೆ ಮಾದರಿಯಾಗಿ ಬೆಳೆಯಬೇಕು. ನಮ್ಮ ಧರ್ಮ, ಸಂಸ್ಕೃತಿ, ಅಚಾರ ವಿಚಾರಗಳನ್ನು ಬಿಟ್ಟುಕೊಡಬಾರದು. ಎಲ್ಲ ರಂಗಗಳಲ್ಲಿಯೂ ನಮ್ಮದೇ ಧರ್ಮದ ಛಾಪು ಮೂಡಿಸುವ ಜೊತೆಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು’ ಎಂದರು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ 170ಕ್ಕು ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಅಭಿನಂದಿಸಲಾಯಿತು.

ನಗರದ ಸಿದ್ದಮಲ್ಲೇಶ್ವರ ವಿರಕ್ತ ಮಠದ ಚನ್ನಬಸವಸ್ವಾಮೀಜಿ, ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ. ನಾಗೇಂದ್ರ, ತಾಲ್ಲೂಕು ಅಧ್ಯಕ್ಷರಾದ ಹಂಗಳ ನಂಜಪ್ಪ. ಹೊಸೂರು ನಟೇಶ್, ಕೆ.ಎಂ.ಬಸವರಾಜಪ್ಪ, ಬಿ.ಮಹದೇವಪ್ರಸಾದ್, ಪುಟ್ಟಸುಬ್ಬಪ್ಪ, ರಾಜ್ಯ ಕಾರ್ಯಕಾರಿಣಿ ಸದಸ್ಯ ಸುಜೇಂದ್ರ, ಜಿಲ್ಲಾ ಉಪಾಧ್ಯಕ್ಷರಾದ ಜಿ.ಎಂ.ಪ್ರಭುಸ್ವಾಮಿ, ಬಿ.ರತ್ನಮ್ಮ, ಖಜಾಂಚಿ ಬಸವರಾಜು, ಕಾರ್ಯದರ್ಶಿ ಕೆ.ಎಂ.ಮಲ್ಲೇಶಪ್ಪ, ಲೋಕೇಶ್ ಕೆ.ಆರ್., ವೀರಭದ್ರಸ್ವಾಮಿ, ಎನ್.ಆರ್. ಪುರುಷೋತ್ತಮ್, ಕಾಡಹಳ್ಳಿ ಮಧು, ನಿರಂಜನಮೂರ್ತಿ, ಪ್ರಮೋದ್, ರತ್ನಮ್ಮ, ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷೆ ವಸಂತಮ್ಮ, ಜೆಎಸ್‌ಎಸ್ ಪಿಆರ್‌ಒ ಆರ್.ಎಂ ಸ್ವಾಮಿ ಇತರರು ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT