ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಧನೆ ಶಿಖರ ತಲುಪಲು ಶ್ರಮ, ಓದು ಬೇಕು:ಗೀತಾ

Published : 9 ನವೆಂಬರ್ 2023, 5:56 IST
Last Updated : 9 ನವೆಂಬರ್ 2023, 5:56 IST
ಫಾಲೋ ಮಾಡಿ
Comments

ಚಾಮರಾಜನಗರ: ವಿದ್ಯಾರ್ಥಿಗಳು ಶ್ರಮಪಟ್ಟು ಓದಿದರೆ ಸಾಧನೆಯ ಶಿಖರ ತಲುಪಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಬುಧವಾರ ತಿಳಿಸಿದರು.

ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ರವರು ಶಾಲೆಗೆ ಸೇರಿದ ನವೆಂಬರ್ 7ರ ದಿನವನ್ನು ಪ್ರತಿಭಾ ಪುರಸ್ಕಾರ ದಿನವನ್ನಾಗಿ ಆಚರಿಸುತ್ತಿದ್ದು, ಇದರ ಅಂಗವಾಗಿ ಸಫಾಯಿ ಕರ್ಮಾಚಾರಿ ಮಕ್ಕಳಿಗೆ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. 

‘ಸಮಾನತೆಗೆ ಹೋರಾಡಿದ ಮಹಾನ್ ವ್ಯಕ್ತಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಮಾಡಿದ ಸಾಧನೆಗಳು ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಬೇಕು. ವಿದ್ಯಾರ್ಥಿ ದೆಸೆಯಲ್ಲಿ ಅಂಬೇಡ್ಕರ್‌ರವರು ಪಟ್ಟ ಕಷ್ಟಗಳನ್ನು ನಾವು ಅನುಭವಿಸುತ್ತಿಲ್ಲ. ಸಂಕಷ್ಟಗಳ ನಡುವೆಯೂ ಅವರು ಮಾಡಿರುವ ಸಾಧನೆಗಳನ್ನು ಎಲ್ಲರೂ ಅರಿತುಕೊಳ್ಳಬೇಕು. ಹುಟ್ಟಿನಿಂದ ಎಲ್ಲರೂ ಎಲ್ಲವನ್ನು ಪಡೆದುಕೊಂಡು ಬಂದಿರುವುದಿಲ್ಲ. ಶ್ರಮದ ಪಟ್ಟರೆ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಶಿಕ್ಷಣ ಪಡೆದರೆ ಮಾತ್ರ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಬಹುದು’ ಎಂದರು. 

ಮುಖಂಡ ಅರಕಲವಾಡಿ ನಾಗೇಂದ್ರ ಮಾತನಾಡಿ, ‘ಸಮಾಜದ ಕಟ್ಟಕಡೆಯ ಸಮುದಾಯಗಳ ಉಳಿವಿಗಾಗಿ ಹೋರಾಡಿದ ಡಾ.ಬಿ.ಆರ್ ಅಂಬೇಡ್ಕರ್ ಸಾಧನೆಗಳು ಎಲ್ಲರಿಗೂ ದಾರಿ ದೀಪವಾಗಬೇಕು. ಅಂಬೇಡ್ಕರ್ ಅವರು ಶಾಲೆಗೆ ದಾಖಲಾದ ದಿನವನ್ನು ಪ್ರತಿಭಾ ಪುರಸ್ಕಾರ ದಿನವಾಗಿ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ’ ಎಂದರು.

ನಗರಸಭೆ ಸದಸ್ಯ ಎಂ.ಮಹೇಶ್ ಮಾತನಾಡಿ, ‘ನ. 7 ಅನ್ನು ಸರ್ಕಾರ ಪ್ರತಿಭಾ ಪುರಸ್ಕಾರ ದಿನವಾಗಿ ಆಚರಿಸುತ್ತಿದ್ದು, ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳ ಜೀವನದಲ್ಲಿ ಬದಲಾವಣೆ ಕಾಣಲೂ ಸಾಧ್ಯವಾಗುತ್ತದೆ. ಪೌರಕಾರ್ಮಿಕ ಪೋಷಕರು ಮಕ್ಕಳಿಗೆ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಹೆಚ್ಚು ಗಮನವಹಿಸಬೇಕು. ಮಕ್ಕಳನ್ನು ಶಿಕ್ಷಣದತ್ತ ಪ್ರೇರೇಪಿಸುವಂತಾಗಬೇಕು’ ಎಂದರು.

ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಪೌರಕಾರ್ಮಿಕರಿಗೆ ಗುರುತಿನ ಚೀಟಿ ನೀಡಲಾಯಿತು.

ಸಫಾಯಿ ಕರ್ಮಾಚಾರಿ ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಸಮಿತಿ ಸದಸ್ಯೆ ಪುಷ್ಪಾ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯೆ ಭಾಗ್ಯ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಸಹಾಯಕ ನಿರ್ದೇಶಕ ಚಿಕ್ಕಬಸವಯ್ಯ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಸುಧಾ, ನಗರಸಭೆ ಆಯುಕ್ತ ರಾಮದಾಸ್  ಇತರರು ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT