ಯಳಂದೂರು: ಹಬ್ಬಗಳ ಸಂದರ್ಭದಲ್ಲಿ ಗ್ರಾಮದ ಹಿರಿಯರು ಮದ್ಯ ಮುಕ್ತ ಹಬ್ಬದ ಆಚರಣೆ ಮಾಡುವ ಮೂಲಕ ಸಾಮಾಜಿಕ ಸಮಸ್ಯೆ ನಿವಾರಣೆಗೆ ಸಹಕಾರ ನೀಡಬೇಕು ಎಂದು ಎಸ್ಐ ಎನ್.ಕರಿಬಸಪ್ಪ ಹೇಳಿದರು.

ತಾಲ್ಲೂಕಿನ ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಹಿಂಡಿ ಮಾರಮ್ಮ ಮಹೋತ್ಸವದ ಹಿನ್ನಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಸಹಸ್ರಾರು ಭಕ್ತರು 4 ದಿನಗಳ ಕಾಲ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಈ ಸಮಯದಲ್ಲಿ ಭಕ್ತರ ಮತ್ತು ವಾಹನ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜನ ಸೇರುವ ಕಡೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ನಿಗಾ ಇಡಲಾಗುತ್ತದೆ. ಆಯ್ದ ಸ್ಥಳಗಳಲ್ಲಿ ಎಲ್ಇಡಿ ಟಿವಿ ಅಳವಡಿಸಿ ದೇವಾಲಯದ ಸೇವಾ ಕೈಂಕರ್ಯ ಪ್ರದರ್ಶನವನ್ನು ನಿರಂತರವಾಗಿ ಬಿತ್ತರಿಸುವ ಮೂಲಕ ದಟ್ಟಣೆ ತಗ್ಗಿಸಲಾಗುವುದು ಎಂದರು.

ಕೊಂಡೋತ್ಸವ ಮತ್ತು ಮೆರವಣಿಗೆ ಸಮಯದಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಹಾಗೂ ದೇವಾಲಯದಲ್ಲಿ ಭಕ್ತರು ನಿರಂತರವಾಗಿ ದರ್ಶನ ಪಡೆಯುವ ನಿಟ್ಟಿನಲ್ಲಿ ಪೊಲೀಸರು ಸಹಕಾರ ನೀಡಿಬೇಕು ಎಂದು ಗ್ರಾಮಸ್ಥರು ಮನವಿ ಸಲ್ಲಿಸಿದರು.

ಏಳು ಗ್ರಾಮಗಳ ಮುಖಂಡರು, ಯಜಮಾನರು ಹಾಗೂ ನಾಡಗೌಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.