ಭಾನುವಾರ, ಅಕ್ಟೋಬರ್ 24, 2021
21 °C
ಬೋಧನಾ ಆಸ್ಪತ್ರೆ ಉದ್ಘಾಟನೆ: ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ ಖಚಿತ

ರಾಷ್ಟ್ರಪತಿ ಭೇಟಿ: ವಾಯುಸೇನೆ ಅಧಿಕಾರಿಗಳಿಂದ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ರಾಷ್ಟ್ರಪತಿ ರಾಮನಾಥ ಕೋವಿಂದ್‌ ಗುರುವಾರ ಜಿಲ್ಲೆಗೆ ಭೇಟಿ ನೀಡುತ್ತಿರುವುದರಿಂದ ಭಾರತೀಯ ವಾಯುಸೇನೆಯ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ಮಂಗಳವಾರ ಯಳಂದೂರು ತಾಲ್ಲೂಕಿನ ವಡಗೆರೆ ಹಾಗೂ ಯಡಬೆಟ್ಟದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್‌ಗಳಲ್ಲಿ ಹೆಲಿಕಾಪ್ಟರ್‌ ಇಳಿಸಿ ಪರಿಶೀಲಿಸಿದರು. 

ಸ್ಥಳೀಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಇನ್ನು ಆಗಬೇಕಾದ ಕೆಲಸಗಳ ಬಗ್ಗೆ ಸಲಹೆ–ಸೂಚನೆ ನೀಡಿದರು. 

ರಾಷ್ಟ್ರಪತಿ ಬಿಳಿಗಿರಿರಂಗನ ಬೆಟ್ಟದ ರಂಗನಾಥಸ್ವಾಮಿ ದೇವಾಲಯಕ್ಕೆ ಗುರುವಾರ ಬೆಳಿಗ್ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ನಗರದ ಹೊರವಲಯದ ಯಡಬೆಟ್ಟದಲ್ಲಿ ನಿರ್ಮಿಸಲಾಗಿರುವ ಬೋಧನಾ ಆಸ್ಪತ್ರೆಯ ಉದ್ಘಾಟನೆ ನೆರವೇರಿಸಲಿದ್ದಾರೆ. 

ಸಿ.ಎಂ ಭೇಟಿ : ಈ ಮಧ್ಯೆ, ಬೋಧನಾ ಆಸ್ಪತ್ರೆಯ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರುವುದು ಖಚಿತವಾಗಿದೆ. 

ಗುರುವಾರ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಬೊಮ್ಮಾಯಿ, ಅಲ್ಲಿಂದ ಮಧ್ಯಾಹ್ನ 1 ಗಂಟೆಗೆ ಯಡಬೆಟ್ಟದಲ್ಲಿರುವ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಬರಲಿದ್ದಾರೆ. ಮಧ್ಯಾಹ್ನ 1.25ಕ್ಕೆ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬಳಿಯ ಹೆಲಿಪ್ಯಾಡ್‌ನಲ್ಲಿ ರಾಷ್ಟ್ರಪತಿ ಅವರನ್ನು ಸ್ವಾಗತಿಸಲಿದ್ದಾರೆ. 

ಮಧ್ಯಾಹ್ನ 3.30ಕ್ಕೆ 450 ಹಾಸಿಗೆ ಸಾಮರ್ಥ್ಯದ ಬೋಧನಾ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4.40ಕ್ಕೆ ರಾಷ್ಟ್ರಪತಿ ಅವರನ್ನು ಬೀಳ್ಕೊಟ್ಟ ನಂತರ, ಸಂಜೆ 5 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು