ಚಾಮರಾಜನಗರ: ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ ಮಾಡಿ ಸೇವಾನಿರತ ಪದವೀಧರ ಶಿಕ್ಷಕರ ಸಮಸ್ಯೆ ಬಗೆಹರಿಸುವವರೆಗೂ ಪ್ರಾಥಮಿಕ ಶಾಲಾ ಶಿಕ್ಷಕರ ಹೆಚ್ಚುವರಿ ಮರು ಹೊಂದಾಣಿಕೆ ಪ್ರಕ್ರಿಯೆ ಮುಂದೂಡಬೇಕು ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

2016ರಲ್ಲಿ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾದಾಗಿನಿಂದ ನೇವಾನಿರತ ಪದವೀಧರ ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ನಿರಂತರವಾಗಿ ಮನವಿ ಮಾಡುತ್ತಾ ಬಂದಿದ್ದರೂ ಸಮಸ್ಯೆ ಬಗೆಹರಿದಿಲ್ಲ. 2025–26ನೇ ಸಾಲಿನಲ್ಲಿ ಪ್ರಾಥಮಿಕ ಶಾಲಾ ಹೆಚ್ಚುವರಿ ಶಿಕ್ಷಕರ ಮರುಹೊಂದಾಣಿಕೆ ಮಾಡುತ್ತಿರುವುದರಿಂದ ತೊಂದರೆಯಾಗುತ್ತಿದೆ. ಪದವೀಧರ ಶಿಕ್ಷಕರ ಸಮಸ್ಯೆ ಬಗೆಹರಿಯುವವರೆಗೂ ಮರು ಹೊಂದಾಣಿಕೆ ಪ್ರಕ್ರಿಯೆ ಮುಂದೂಡಬೇಕು ಎಂದು ಒತ್ತಾಯಿಸಿದರು.

ಇಲಾಖೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಸಂಖ್ಯೆ ಕಡಿಮೆ ಇದ್ದು ಹೆಚ್ಚುವರಿ ಮಾಡದೆ, ಶಾಲೆಗೊಬ್ಬರು ದೈಹಿಕ ಶಿಕ್ಷಕ ಹಾಗೂ ಮುಖ್ಯ ಶಿಕ್ಷಕರು ಕರ್ತವ್ಯ ನಿರ್ವಹಿಸುವಂತೆ ಮಾಡಬೇಕು, ಹೆಚ್ಚುವರಿ ಶಿಕ್ಷಕರಿಗೆ ಮುಂದಿನ ವರ್ಗಾವಣೆಗಳಲ್ಲಿ ಸೇವಾವಧಿ ಮಿತಿಗೊಳಿಸದೆ ಮುಕ್ತ ವರ್ಗಾವಣೆಗೆ ಅವಕಾಶ ಕಲ್ಪಿಸಬೇಕು.

‘ಮುಖ್ಯ ಶಿಕ್ಷಕರ ಹುದ್ದೆಯನ್ನು ಮಕ್ಕಳ ಸಂಖ್ಯೆಗೆ ನಿಗದಿಗೊಳಿಸದೆ ಶಾಲೆಗೊಬ್ಬರನ್ನು ನಿಯೋಜಿಸಬೇಕು. ಮಾರುಕಟ್ಟೆಯಲ್ಲಿ ಮೊಟ್ಟೆ ಧಾರಣೆಗೆ ತಕ್ಕಂತೆ ಮೊಟ್ಟೆಯ ದರ ನಿಗದಿಗೊಳಿಸಿ ಆರ್ಥಿಕ ಹೊರೆ ಕಡಿಮೆಗೊಳಿಸಬೇಕು. ಪಿಎಸ್ಟಿ ಶಿಕ್ಷಕರ ಸಮಸ್ಯೆ ಬಗೆಹರಿಯುವವರೆಗೂ ಸರ್ಕಾರ, ಇಲಾಖೆ ನಿಗದಿಪಡಿಸಿರುವ ಪಿಎಸ್ಟಿ ಹುದ್ದೆಯಲ್ಲಿ ಮುಂದುವರಿಸಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಮಾದಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವ ಸ್ವಾಮಿ, ಡಿ.ಎನ್.ಭರತ್ ಭೂಷಣ, ಎಂ.ಡಿ.ಮಹದೇವಯ್ಯ, ರಾಚಯ್ಯ, ತಾಲ್ಲೂಕು ಅಧ್ಯಕ್ಷರಾದ ಸಿ.ಕೆ.ರಾಮಸ್ವಾಮಿ, ಸೋಮಣ್ಣ, ಪದಾಧಿಕಾರಿಗಳಾದ ಮಹದೇವಸ್ವಾಮಿ ಬಿ.ಕೃಷ್ಣಮೂರ್ತಿ, ಸುಧಾ, ಸವಿತಾರಾಣಿ, ನಾಗರಾಜು, ಸಿ.ಮಹದೇವಸ್ವಾಮಿ, ಮಲ್ಲಿಕಾರ್ಜುನ, ನಟರಾಜು, ಮಹದೇವಸ್ವಾಮಿ, ಸಿ.ಎಂ.ಮುರುಗೇಶ್ ಕುಮಾರ್, ವಿ.ಶಾಂತರಾಜು, ಮಂಜುಳ, ಚಂದ್ರಮ್ಮ, ನಂಜಯ್ಯ, ಗುರುಮೂರ್ತಿ, ರಿಜ್ವಾನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.