ಗುರುವಾರ , ಜುಲೈ 7, 2022
25 °C

ಚಾಮರಾಜನಗರ: ಕಾರಾಗೃಹದಲ್ಲಿ ಕೈದಿ ಸಾವು, ಆತ್ಮಹತ್ಯೆ ಶಂಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿ‌ ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ.

ಕಾರಾಗೃಹದ ಮಹಡಿಯಿಂದ ಕೆಳಗಡೆ ಬಿದ್ದು ಆತ ಮೃತಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಜೈಲಿನ ಅಧಿಕಾರಿಗಳು ಶಂಕಿಸಿದ್ದಾರೆ.

ತಾಲ್ಲೂಕಿನ ಉತ್ತುವಳ್ಳಿ ಗ್ರಾಮದ ಮಂಜು ಮೃತಪಟ್ಟ ಕೈದಿ. ನಾಲ್ಕು ವರ್ಷಗಳ ಹಿಂದೆ ಪತ್ನಿಯನ್ನೇ ಕೊಲೆ ಮಾಡಿದ ಪ್ರಕರಣದಲ್ಲಿ ಇದೇ 8ರಂದು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ.

'ಶಿಕ್ಷೆಯಾಗಿರುವುದಕ್ಕೆ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಾಣಿಸುತ್ತಿದೆ. ಬೆಳಿಗ್ಗೆ 7.15ರ ಸುಮಾರಿಗೆ ಮಹಡಿಯಿಂದ ಕೆಳಗಡೆ ಬಿದ್ದಿದ್ದಾನೆ. ತಕ್ಷಣ ಸಿಬ್ಬಂದಿ ಆಸ್ಪತ್ರೆಗೆ ಕರೆದುಕೊಂಡಿದ್ದಾರೆ. ಆದರೆ ಅಷ್ರರಲ್ಲಾಗಲೇ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದರು' ಎಂದು ಕಾರಾಗೃಹದ ಸೂಪರಿಂಟೆಂಡೆಂಡ್ ವಿಜಯ್ ರೋಡ್ಕರ್ ಅವರು 'ಪ್ರಜಾವಾಣಿ'ಗೆ ತಿಳಿಸಿದರು.

'ಸಾಮಾನ್ಯವಾಗಿ ಶಿಕ್ಷೆಗೆ ಗುರಿಯಾಗಿರುವ ಕೈದಿಗಳನ್ನು ಜಿಲ್ಲಾ ಕಾರಾಗೃಹದಲ್ಲಿ ಇರಿಸುವುದಿಲ್ಲ. ಮೈಸೂರಿಗೆ ಸ್ಥಳಾಂತರಿಸಲಾಗುತ್ತದೆ. ನ್ಯಾಯಾಲಯದಲ್ಲಿ ಶಿಕ್ಷೆ ಘೋಷಣೆಯಾದ ದಿನವೇ, ಮೈಸೂರಿನ ಕಾರಾಗೃಹಕ್ಕೆ ಸ್ಥಳಾಂತರಿಸಬೇಕಿತ್ತು. ಆದರೆ, ಚುನಾವಣೆ ಇದ್ದುದರಿಂದ ಪೊಲೀಸರು ಆ ಕರ್ತವ್ಯದಲ್ಲಿ ಇದ್ದರು. ಹೀಗಾಗಿ ಕರೆದುಕೊಂಡಲು ಆಗಿರಲಿಲ್ಲ' ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು