ಚಾಮರಾಜನಗರ: ಪೌರತ್ವ (ತಿದ್ದುಪಡಿ) ಮಸೂದೆಯ ವಿರುದ್ಧ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ) ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಭುವನೇಶ್ವರಿ ವೃತ್ತದಲ್ಲಿ ಸಮಾವೇಶಗೊಂಡ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೇಂದ್ರವು ಲೋಕಸಭೆಯಲ್ಲಿ ಮಂಡಿಸಿದ ಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆಯು ಮುಸ್ಲಿಮರ ವಿರುದ್ಧದ ಅಜೆಂಡಾ ಆಗಿದೆ ಎಂದು ಆರೋಪಿಸಿದರು.

ಬಾಂಗ್ಲಾ ನುಸುಳುಕೋರರ ಪತ್ತೆ ಹಚ್ಚುವ ನೆಪದಲ್ಲಿ ಇಲ್ಲಿಯೇ ಹುಟ್ಟಿ ಬೆಳೆದಿರುವ ಮುಸ್ಲಿಮರ ಪೌರತ್ವ ನಿಷೇಧಿಸುವ ದುಸ್ಸಾಹಸಕ್ಕೆ ಕೇಂದ್ರ ಸರ್ಕಾರ ಕೈಹಾಕಿದೆ ಎಂದರು.

ಇಂತಹ ಸಾಹಸ ನಿಲ್ಲಿಸಬೇಕು. ಅದರ ಬದಲು ಬಾಂಗ್ಲಾ ನುಸುಳುಕೋರರು ಇರುವಂತಹ ಜಿಲ್ಲೆಗಳಲ್ಲಿ ಸರ್ಕಾರದ ಇಲಾಖೆಗಳನ್ನು ಬಳಸಿಕೊಂಡು ಸಮೀಕ್ಷೆ ಮಾಡಿಸಿ ಕ್ರಮ ಕೈಗೊಳ್ಳಬಹುದಲ್ಲ.ನುಸುಳುಕೋರರನ್ನು ಪತ್ತೆ ಹಚ್ಚಲಾಗದೆ ನಮ್ಮ ಪೌರತ್ವ ಕೇಳಲು ಬಂದರೆ ಪರಿಸ್ಥಿತಿ ಸರಿ ಇರುವುದಿಲ್ಲ ಎಂದು ಎಚ್ಚರಿಸಿದರು.

ಬಾಂಗ್ಲಾ ದೇಶ, ಪಾಕಿಸ್ತಾನ, ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದ ಹಿಂದೂ, ಸಿಖ್, ಬೌದ್ಧ ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ಕೊಡುವುದಾಗಿ ಹೇಳಿರುವ ಸರ್ಕಾರದ ಹೇಳಿಕೆ ಕೇವಲ ಕಣ್ಣೊರೆಸುವ ತಂತ್ರವಾಗಿದ್ದು, ಮುಸ್ಲಿಮರನ್ನೇ ಟಾರ್ಗೆಟ್ ಮಾಡಲಾಗಿದೆ. ಈ ಬಗ್ಗೆ ಜನರು ಜಾಗೃತರಾಗಬೇಕು ಎಂದುಸಲಹೆನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.