ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದಿ ಹೇರಿಕೆ ಖಂಡಿಸಿ ಪ್ರತಿಭಟನೆ

Last Updated 15 ಅಕ್ಟೋಬರ್ 2022, 15:59 IST
ಅಕ್ಷರ ಗಾತ್ರ

ಚಾಮರಾಜನಗರ: ರಾಜ್ಯದಲ್ಲಿ ಹಿಂದಿ ಹೇರಿಕೆ ಖಂಡಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಶನಿವಾರ ಕಪ್ಪುಪಟ್ಟಿ ಪ್ರದರ್ಶಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಡಳಿತ ಭವನ ಗೇಟ್ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ‘ಕೇಂದ್ರ ಸರ್ಕಾರ ಬಲವಂತವಾಗಿ ಕರ್ನಾಟಕ ರಾಜ್ಯದ ಮೇಲೆ ಹಿಂದಿ ಹೇರಿಕೆ ಮಾಡುತ್ತಿರುವುದು ಅತ್ಯಂತ ಖಂಡನೀಯ.ಕನ್ನಡದ ಮೇಲೆ ಯಾವುದೇ ಕಾರಣಕ್ಕೂ ಹಿಂದಿ ಹೇರಿಕೆ ಮಾಡಬಾರದು. ಇಲ್ಲಿ ಕನ್ನಡವೇ ಸಾರ್ವಭೌಮ ಭಾಷೆ’ ಎಂದರು.

ರಾಜ್ಯದಲ್ಲಿಹಿಂದಿ ಹೇರಿಕೆಗೆ ಅವಕಾಶ ಕೊಡುವುದಿಲ್ಲ. ಕೇಂದ್ರ ಸರ್ಕಾರ ದೇಶದ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ, ಕನ್ನಡವೇ ಸಾರ್ವಭೌಮ, ಕನ್ನಡವೇ ಸರ್ವಸ್ವ. ಇದೆಲ್ಲ ಗೊತ್ತಿದ್ದರೂ ಕೇಂದ್ರ ಸರ್ಕಾರ ಬಲವಂತವಾಗಿ ರಾಜ್ಯದ ಮೇಲೆ ಹಿಂದಿಹೇರಿಕೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯದಾದ್ಯಂತ ಕೇಂದ್ರ ಸರ್ಕಾರದ ನೀತಿ ಖಂಡಿಸಿ ದೊಡ್ಡ ಜನಾಂದೋಲನ ಮಾಡುತ್ತೇವೆ’ ಎಂದರು.

ಶಾ.ಮುರಳಿ, ಗು.ಪುರುಷೋತ್ತಮ್, ಪಣ್ಯದಹುಂಡಿ ರಾಜು, ಗಡಿನಾಡು ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಚಾ.ರಾ.ಕುಮಾರ್, ಉಪಾಧ್ಯಕ್ಷ ಚಾ.ಸಿ.ಸಿದ್ದರಾಜು, ಕಾರ್ತಿಕ್, ಡಿಎಸ್‌ಎಸ್ ಮುಖಂಡ ಯರಿಯೂರು ರಾಜಣ್ಣ, ರಾಮಸಮುದ್ರ ಸುರೇಶ್, ತಾಂಡವಮೂರ್ತಿ, ದೊರೆ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT