ಶುಕ್ರವಾರ, ನವೆಂಬರ್ 27, 2020
22 °C

ಮಹಾರಾಷ್ಟ್ರ ಸರ್ಕಾರದ ವಿರುದ್ದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ರಾಜ್ಯದ ನಿಪ್ಪಾಣಿ, ಕಾರವಾರ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ಅಲ್ಲಿನ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರು ನೀಡಿರುವ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪೊರಕೆ ಚಳವಳಿ ನಡೆಸಿದರು.

ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನನಿತರರು, ಅಲ್ಲಿಂದ ಮೆರವಣಿಗೆ ಮೂಲಕ  ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ, ಅಜಿತ್ ‌ಪವಾರ್, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರು ಮಾತನಾಡಿ, ‘ಮಹಾರಾಷ್ಟ್ರ ಸರ್ಕಾರ ಪದೆ ಪದೇ ಕನ್ನಡಿಗರ ಮೇಲೆ ಕ್ಯಾತೆ ತೆಗೆಯುತ್ತಿದೆ. ಅಜಿತ್ ‌ಪವಾರ್ ಹೇಳಿಕೆ ಖಂಡನೀಯವಾದದ್ದು, ಮಹಾಜನ ವರದಿ ಪ್ರಕಾರ ಸೊಲ್ಲಾಪುರ ಸೇರಿದಂತೆ ಮಹಾರಾಷ್ಟ್ರದ ಇತರ ಪ್ರದೇಶಗಳು ಕರ್ನಾಟಕಕ್ಕೆ ಸೇರಬೇಕಿದೆ’ ಎಂದರು.

ಶಾ.ಮುರಳಿ, ಕಂಡಕ್ಟರ್ ಚಾ.ಸಿ.ಸೋಮನಾಯಕ, ಚಾ.ವೆಂ.ರಾಜ್‌ಗೋಪಾಲ್, ನಿಜಧ್ವನಿಗೋವಿಂದರಾಜು, ಗು.ಪುರುಷೋತ್ತಮ್, ತಾಂಡವಮೂರ್ತಿ, ಪಣ್ಯದಹುಂಡಿರಾಜು, ಮಹೇಶ್‌ಗೌಡ, ಲಿಂಗರಾಜು, ಎಂಡಿಆರ್ ಸ್ವಾಮಿ, ಶಿವಶಂಕರ್‌ನಾಯಕ, ನಂಜುಂಡಚಾರ್, ವೀರಭದ್ರ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು