ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಟೋಲ್ ದರ ಇಳಿಸಬೇಕು ಎಂದು ಎಂದು ಆಗ್ರಹಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಚಾಮರಾಜೇಶ್ವರ ಉದ್ಯಾನದ ಆವರಣದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಕೇಂದ್ರ ಸರ್ಕಾರ ವಿರುದ್ದ ಧಿಕ್ಕಾರ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರು ಮಾತನಾಡಿ, ‘ಹೆದ್ದಾರಿ ಪ್ರಾಧಿಕಾರವು ಟೋಲ್‌ಗಳಲ್ಲಿ ದುಬಾರಿ ಶುಲ್ಕ ವಸೂಲಿ ಮಾಡುವ ಮೂಲಕ ಹಗಲು ದರೋಡೆ ಮಾಡುತ್ತಿದೆ’ ಎಂದು ಆರೋಪಿಸಿದರು.

‘ಕೋವಿಡ್ ಸಂದರ್ಭದಲ್ಲಿ ಜನರು ಜೀವನ ಸಾಗಿಸಲು ಕಷ್ಟ ಪಡುತ್ತಿದ್ದಾರೆ. ಚಾಮರಾಜಗರದಿಂದ ಮೈಸೂರಿಗೆ ಹೋಗಬೇಕಾದರೆ ಟೋಲ್‌ನಲ್ಲಿ ಒಂದು ಕಾರಿಗೆ ₹100 ಶುಲ್ಕ ಕಟ್ಟಬೇಕು. ಬಸ್‌ಗೆ ₹300 ಶುಲ್ಕ ಕಟ್ಟಬೇಕಿದೆ. ಕೂಡಲೇ ಟೋಲ್ ದರ ಇಳಿಸದಿದ್ದರೆ ರಾಷ್ಟ್ರೀಯ ಹೆದ್ದಾರಿ ಕಚೇರಿ ಮುಂದೆ, ಟೋಲ್‌ಗಳ ಮುಂದೆ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಶಾ.ಮುರಳಿ, ಚಾ.ವೆಂ.ರಾಜ್ ಗೋಪಾಲ್, ಗಡಿನಾಡು ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಚಾ.ರಾ.ಕುಮಾರ್, ಚಾ.ಸಿ.ಸೋಮನಾಯಕ, ಶಿವಶಂಕರನಾಯಕ, ಪಣ್ಯದ ಹುಂಡಿರಾಜು, ತಾಂಡವಮೂರ್ತಿ, ವೀರಭದ್ರ, ಸ್ವಾಮಿ, ಸುರೇಶ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.