ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

Last Updated 3 ಮಾರ್ಚ್ 2021, 12:59 IST
ಅಕ್ಷರ ಗಾತ್ರ

ಚಾಮರಾಜನಗರ:ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಭುವನೇಶ್ವರಿ ವೃತ್ತದಲ್ಲಿ ಖಾಲಿ ಸಿಲಿಂಡರ್‌ ಇಟ್ಟು, ಕಲ್ಲಿನಿಂದ ಒಲೆ ನಿರ್ಮಿಸಿ ಚಹಾ ತಯಾರಿಸುವ ಮೂಲಕ ಬೆಲೆ ಏರಿಕೆಯನ್ನು ಖಂಡಿಸಿದರು.

ಚಾಮರಾಜೇಶ್ವರ ಉದ್ಯಾನದ ಆವರಣದಲ್ಲಿ ಸೇರಿದ ಪ್ರತಿಭಟನಕಾರರು ಅಲ್ಲಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ತೆರಳಿದರು. ವೃತ್ತದಲ್ಲಿ ರಸ್ತೆ ತಡೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಗತ್ಯ ವಸ್ತುಗಳ ಬೆಲೆ ಇಳಿಸುವಂತೆ ಆಗ್ರಹಿಸಿದರು.

ಸೇನೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರು ಮಾತನಾಡಿ, ‘ಕೇಂದ್ರ ಸರ್ಕಾರ, ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಹಾಗೂ ಅಡುಗೆ ಎಣ್ಣೆ ಸೇರಿದಂತೆ ಜನರು ದಿನನಿತ್ಯ ಬಳಸುವ ವಸ್ತುಗಳ ಬೆಲೆಯನ್ನು ದಿನೇ ದಿನೇ ಹೆಚ್ಚಿಸುತ್ತಿದೆ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಅಗತ್ಯ ವಸ್ತುಗಳ ಬೆಲೆಯನ್ನು ಇಳಿಸಲು ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಿರಂತರವಾಗಿ ಹೋರಾಟ ನಡೆಸಲಾಗುವುದು’ ಎಂದರು.

ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿರಾಜು, ಚಾ.ರಾ.ಕುಮಾರ್, ಶಿವಶಂಕರ ನಾಯಕ, ನಂಜುಂಡ, ವೀರಭದ್ರ, ತಾಂಡವಮೂರ್ತಿ, ದೊರೆ, ಸ್ವಾಮಿ, ಗಾಡಿ ಸ್ವಾಮಿ, ಲಿಂಗರಾಜು ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT