ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಬಜೆಟ್‌ ವಿರೋಧಿಸಿ ಅರೆಬೆತ್ತಲೆ ಪ್ರತಿಭಟನೆ

Last Updated 6 ಮಾರ್ಚ್ 2020, 15:42 IST
ಅಕ್ಷರ ಗಾತ್ರ

ಚಾಮರಾಜನಗರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಡಿಸಿದ ಬಜೆಟ್‌ನಲ್ಲಿಜಿಲ್ಲೆಗೆ ಪ್ರಾತಿನಿಧ್ಯ ನೀಡಿಲ್ಲ ಎಂದು ಆರೋಪಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಡಳಿತ ಭವನದ ಗೇಟ್‌ ಮುಂಭಾಗ ಜಮಾಯಿಸಿದ ಪ್ರತಿಭಟನಾನಿರತರು ತಮ್ಮ ಅಂಗಿಯನ್ನು ಕಳಚಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಈ ಸಾಲಿನಬಜೆಟ್‌ನಲ್ಲಿಜಿಲ್ಲೆಯ ಅಭಿವೃದ್ಧಿಬಗ್ಗೆ ನಿರೀಕ್ಷೆ ಇರಿಸಿಕೊಳ್ಳಲಾಗಿತ್ತು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಡಿಸಿದಬಜೆಟ್‌ಸಂಪೂರ್ಣ ವಿಫಲವಾಗಿದೆ.ಬಜೆಟ್‌ನಲ್ಲಿಜಿಲ್ಲೆಯನ್ನು ಕಡೆಗಣಿಸಲಾಗಿದೆಎಂದು ಆರೋಪಿಸಿದರು.

ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವುದು, ಪ್ರವಾಸೋದ್ಯಮ ಪುನಶ್ಚೇತನ, ಕಾರ್ಖಾನೆ ಸ್ಥಾಪನೆ ಹಾಗೂ ಕನ್ನಡ ಭವನ ಸ್ಥಾಪನೆಗಾಗಿ ಅನುದಾನ ಮೀಸಲಿಡಬಹುದುಎಂಬ ನಿರೀಕ್ಷೆ ಇತ್ತು. ನಮ್ಮ ನಿರೀಕ್ಷೆ ಹುಸಿಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ ಕುಮಾರ್ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಬಜೆಟ್‌ನಲ್ಲಿ ಜಿಲ್ಲೆಯ ಅಭಿವೃದ್ಧಿಗೆಅನುದಾನ ಮೀಸಲಿರಿಸಲುವಿಫಲರಾಗಿದ್ದಾರೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಸೇನಾಪಡೆಯಅಧ್ಯಕ್ಷ ಚಾ.ರಂ. ಶ್ರೀನಿವಾಸಗೌಡ, ಗೌರವಾಧ್ಯಕ್ಷ ಶಾ. ಮುರಳಿ, ಪ್ರಧಾನ ಕಾರ್ಯದರ್ಶಿ ರಾಜ್‌ಗೋಪಾಲ್, ಪಣ್ಯದಹುಂಡಿ ರಾಜು, ನಿಜಧ್ವನಿ ಗೋವಿಂದರಾಜು, ನಂಜುಂಡಸ್ವಾಮಿ, ಎಂಡಿಆರ್‌ ಸ್ವಾಮಿ, ಟೈಲರ್‌ ನಟರಾಜು, ತಾಂಡವಮೂರ್ತಿ, ವೀರಭದ್ರ, ಮಂಜು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT