ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಯಂ ಉಪನ್ಯಾಸಕರ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

Last Updated 13 ಜನವರಿ 2021, 15:27 IST
ಅಕ್ಷರ ಗಾತ್ರ

ಚಾಮರಾಜನಗರ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಕಾಯಂ ಉಪನ್ಯಾಸಕರನ್ನು ನೇಮಿಸುವಂತೆ ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಸಂಘದ (ಬಿವಿಎಸ್‌) ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಶಿರಸ್ತೇದಾರ ಕುಮಾರ್ ಅವರ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.

‘ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ 250 ವಿದ್ಯಾರ್ಥಿಗಳಿದ್ದಾರೆ. ಎಲ್ಲ ಕಡೆಗಳಲ್ಲೂ 2020 ರ ನವೆಂಬರ್ 17 ರಿಂದ ಆನ್‌ಲೈನ್‌ನಲ್ಲಿ ತರಗತಿಗಳು ಪ್ರಾರಂಭವಾಗಿವೆ. ಇಲ್ಲಿನ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳು ನಡೆಯುತ್ತಿಲ್ಲ. ಕಾಯಂ ಉಪನ್ಯಾಸಕರ ಕೊರತೆ ಇದ್ದು, ಈ ವರ್ಷ ಅತಿಥಿ ಉಪನ್ಯಾಸಕರು ಕೂಡ ಬರುತ್ತಿಲ್ಲ. ಪಾಠ ನಡೆಯದೇ ಇರುವುದರಿಂದ ಮುಂದಿನ ಪರೀಕ್ಷೆಗೆ ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ. ಕೂಡಲೇ ಕಾಯಂ ಉಪನ್ಯಾಸಕರನ್ನು ನಿಯೋಜನೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಸಂಘದ ಸಂಚಾಲಕ ಪರ್ವತರಾಜ್‌,ಎಸ್.ಭರತ್, ಕಾರ್ತಿಕ್, ವಿಶ್ವಾಸ್, ಸಂತೋಷ್, ಮನೋಜ್, ಭಾಗ್ಯ, ಅಶ್ರಿತಾ, ಕವಿತಾ, ಪುಷ್ಷಲತಾ, ಲಕ್ಷ್ಮಿ, ಅಂಜಲಿ, ಸೌಮ್ಯ, ಆಶಾ, ರಶ್ಮಿತಾ, ನವೀನ, ರಾಜೇಶ್, ರಾಮು, ಮಹೇಶ್, ಮಲ್ಲಿಕಾರ್ಜುನ, ಸಂತೋಷ್ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT