ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲು ಆಗ್ರಹ

Last Updated 28 ಅಕ್ಟೋಬರ್ 2020, 13:58 IST
ಅಕ್ಷರ ಗಾತ್ರ

ಚಾಮರಾಜನಗರ: ಐಟಿಐ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಟೂಲ್‌ಕಿಟ್‌ ಹಾಗೂ ಟೂಲ್‌ಕಿಟ್‌ ವಿತರಿಸುವಂತೆ ಆಗ್ರಹಿಸಿ ಭಾರತೀಯ ವಿದ್ಯಾರ್ಥಿ ಸಂಘದ (ಬಿವಿಎಸ್‌) ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಖಾಸಗಿ ಶಾಲೆಗಳಲ್ಲಿ ಹೆಚ್ಚು ಶುಲ್ಕ ತೆಗೆದುಕೊಳ್ಳುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ದ ಕ್ರಮಕೈಗೊಳ್ಳುವಂತೆಯೂ ಅವರು ಒತ್ತಾಯಿಸಿದರು.

ನಗರದ ಚಾಮರಾಜೇಶ್ವರ ಉದ್ಯಾನದಲ್ಲಿ ಸಮಾವೇಶಗೊಂಡ ಪ್ರತಿಭಟನಕಾರರು ಅಲ್ಲಿಂದ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನದವರೆಗೆ ಮೆರವಣಿಗೆಯಲ್ಲಿ ಸಾಗಿ ನಡೆಸಿ, ಭವನದ ಮುಂಭಾಗ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾ ಸಂಯೋಜಕ ಪರ್ವತ್‌ರಾಜ್ ಅವರು ಮಾತನಾಡಿ, ‘ಐಟಿಐಗಳಲ್ಲಿ ತರಬೇತಿ ಪಡೆಯುತ್ತಿರುವ 2018–20ನೇ ಸಾಲಿನ ದ್ವಿತೀಯ ವರ್ಷದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಮತ್ತು ಟೂಲ್‌ಕಿಟ್‌ ನೀಡದಿರುವುದರಿಂದ ಅವರು ತೊಂದರೆಗೆ ಒಳಗಾಗಿದ್ದಾರೆ. ಸದ್ಯ ಕೋವಿಡ್‌ ಕಾರಣದಿಂದ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳು ನಡೆಯುತ್ತಿದ್ದು, ಲ್ಯಾಪ್‌ಟಾಪ್ ಇಲ್ಲದೆ ಸಮಸ್ಯೆಗೆ ಸಿಲುಕಿದ್ದಾರೆ. 2019–21ನೇ ಸಾಲಿನ, ಪ್ರಥಮ ವರ್ಷದ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಮತ್ತು ಟೂಲ್‌ಕಿಟ್ ವಿತರಣೆ ಮಾಡಲಾಗಿದೆ. ಆದರೆ, ಅದರ ಹಿಂದಿನ ಸಾಲಿನ ವಿದ್ಯಾರ್ಥಿಗಳಿಗೆ ನೀಡದೇ ಇರುವುದು ಖಂಡನೀಯ. ಸರ್ಕಾರ ಶೀಘ್ರದಲ್ಲಿ ಅವರಿಗೂ ಲ್ಯಾಪ್‌ಟಾಪ್‌ ಹಾಗೂ ಟೂಲ್‌ಕಿಟ್‌ ವಿತರಿಸಲು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಖಾಸಗಿ ಶಾಲೆಗಳಲ್ಲಿ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ದ ಕ್ರಮಕೈಗೊಳ್ಳುವಂತೆಯೂ ಪ್ರತಿಭಟನನಿರತರು ಒತ್ತಾಯಿಸಿದರು.

‘ಖಾಸಗಿ ಶಾಲೆಗಳಲ್ಲಿ ಕೂಲಿ ಕಾರ್ಮಿಕರ ಮಕ್ಕಳು, ರೈತರು, ವ್ಯಾಪಾರಸ್ಥರ ಮಕ್ಕಳು ಮತ್ತು ನೌಕರರ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ, ಕೋವಿಡ್‌ ಕಾರಣದಿಂದ ಕೂಲಿ ಕಾರ್ಮಿಕರು ಮತ್ತು ರೈತರಿಗೆ ಜೀವನ ನಡೆಸುವುದೇ ಕಷ್ಟವಾಗಿದೆ. ಎಲ್ಲ ಖಾಸಗಿ ಶಾಲೆಗಳಲ್ಲಿ ಈ ಬಾರಿಯೂ ಪೋಷಕರಿಂದ ಒತ್ತಡ ಹಾಕಿ ಕಟ್ಟಿಸಿಕೊಳ್ಳುತ್ತಿದ್ದಾರೆ. ಜೂನ್‌ನಿಂದ ಇಲ್ಲಿಯವರೆಗೂ ಶಾಲೆ ನಡೆದಿಲ್ಲ. ಆನ್‌ಲೈನ್ ತರಗತಿಗಳನ್ನು ನಡೆಸಿ ಒಂದಷ್ಟು ಮನೆಕೆಲಸ ಕೊಟ್ಟಿದ್ದಾರೆ. ಇದಕ್ಕೆ ಪೂರ್ಣ ಪ್ರಮಾಣದ ಶುಲ್ಕ ಕಟ್ಟಿಸಿಕೊಳ್ಳುತ್ತಿದ್ದಾರೆ’ ಎಂದು ದೂರಿದರು.

ಬಿವಿಎಸ್‌ನ ಶಿವಕುಮಾರ್, ಪುನೀತ್, ಮಧುಕುಮಾರ್, ರಾಹುಲ್, ಮಹದೇವ್, ಶರತ್, ರೋಹಿತ್, ಅಶೋಕ್, ಮಧು, ಹರಿಭಕ್ತ, ಮದನ್, ಸಚಿನ್, ಪ್ರವೀಣ್, ಮಹೇಶ್, ಮಹದೇವಸ್ವಾಮಿ, ನವೀನ್, ಕಾಂತರಾಜ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT