ಚಾಮರಾಜನಗರ: ಆರನೇ ವೇತನ ಆಯೋಗದ ಶಿಫಾರಸಿನಂತೆ ಸಂಬಳ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರು ಸೋಮವಾರ ತಮ್ಮ ಕುಟುಂಬದ ಸದಸ್ಯರೊಂದಿಗೆ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿದರು.

ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿ ಕರ್ನಾಟಕ ರಾಜ್ಯ ರೈತ ಸಂಘ, ದಲಿತ, ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಕೂಡ ಪ್ರತಿಭಟನೆಯಲ್ಲಿ ಭಾಗಿಯಾದರು. ಸಾರಿಗೆ ನೌಕರರು ಹಾಗೂ ಅವರ ಕುಟುಂಬದ ಸದಸ್ಯರು, ತಟ್ಟೆ, ಲೋಟಗಳನ್ನು ಬಡಿಯುವುದರ ಮೂಲಕ ತಟ್ಟೆ ಚಳವಳಿ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಸಾರಿಗೆ ನೌಕರರ ಒಕ್ಕೂಟದ ಬಿ.ರಾಜೇಶ್ ಅವರು ಮಾತನಾಡಿ, ‘ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಖಾಸಗಿ ಬಸ್ಗಳನ್ನು ತಂದು ಕಾರ್ಯಾಚರಣೆ ಮಾಡುವ ಮೂಲಕ ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಒಂದು ವೇಳೆ ಸರ್ಕಾರ ಎಸ್ಮಾ ಜಾರಿ ಮಾಡಿದರೆ ಜೈಲ್ ಭರೋ ಚಳವಳಿ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನರಾಗಿ ಪರಿಗಣಿಸುವಂತೆ ಒತ್ತಾಯಿಸಿ ಕಳೆದ ಡಿಸೆಂಬರ್ನಲ್ಲಿ ಮುಷ್ಕರ ನಡೆಸಿದ ಸಂದರ್ಭದಲ್ಲಿ ರಾಜ್ಯ ಸರ್ಕಾರ, 6ನೇ ವೇತನ ಆಯೋಗದ ಶಿಫಾರಸಿನಂತೆ ವೇತನ ನೀಡುವುದು ಸೇರಿದಂತೆ ಹತ್ತು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿತ್ತು. ಆದರೆ, ಈಡೇರಿಸಿಲ್ಲ. ಒಂಬತ್ತು ಬೇಡಿಕೆಗಳನ್ನು ಈಡೇರಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ, ಇದು ನೌಕರರಿಗೆ ಅನುಕೂಲವಾಗಿಲ್ಲ. ಸರ್ಕಾರ ಕೊಟ್ಟ ಮಾತಿಗೆ ತಪ್ಪಿದೆ’ ಎಂದು ಆಕ್ರೋಶ ವ್ಯಕ್ತಪಸಿಸಿದರು.

‘ಸರ್ಕಾರವು ತಕ್ಷಣ ನೌಕರರಿಗೆ ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ನೀಡಬೇಕು. ನೌಕರರಿಗೆ ಅನುಕೂಲಕರವಾಗಿಲ್ಲದ ಎಂಟು ಭರವಸೆಗಳಲ್ಲಿನ ದೋಷಗಳನ್ನು ಸರಿಪಡಿಸಬೇಕು’ ಎಂದು ಅವರು ಒತ್ತಾಯಿಸಿದರು.

ರೈತ ಸಂಘದ ಹೊನ್ನೂರು ಬಸವಣ್ಣ ಮಾತನಾಡಿ, ‘ರಾಜ್ಯ ಸರ್ಕಾರ ಕಾರ್ಮಿಕರು, ರೈತರು ಹಾಗು ಬಡವರ ವಿರೋಧಿಯಾಗಿದೆ. ಕಳೆದ ಮೂರು ತಿಂಗಳಿಂದ ದೆಹಲಿಯಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದರೂ ರೈತ ವಿರೋಧಿ ಕಾಯ್ದೆಯನ್ನು ವಾಪಸ್ ಪಡೆದಿಲ್ಲ. ರಾಜ್ಯದಲ್ಲಿ ಸಾರಿಗೆ ಬಸ್ ನೌಕರರು, ತಮ್ಮ ನ್ಯಾಯಯತ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಿದರೆ ಕ್ಯಾರೆ ಎನ್ನುತ್ತಿಲ್ಲ. ಇದಕ್ಕೆ ವಿರುದ್ಧವಾಗಿ ಖಾಸಗಿ ಬಸ್ ಮಾಲೀಕರಿಗೆ ಕುಮ್ಮಕ್ಕು ನೀಡುತ್ತಿದೆ. ರೈತರ ಮಕ್ಕಳಾದ ಕೆಎಸ್ಆರ್ಟಿಸಿ ನೌಕರರಿಗೆ ಹೊಟ್ಟೆ ತುಂಬವಷ್ಟು ಸಂಬಳ ನೀಡಿ ಎನ್ನುವುದು ತಪ್ಪಾ’ ಎಂದು ಪ್ರಶ್ನೆ ಮಾಡಿದರು.

ಸಮಾಜವಾದಿ ಜನತಾ ಪಾರ್ಟಿ ಮುಖಂಡ ಜಿ.ಎಂ.ಗಾಡ್ಕರ್, ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ, ಪ್ರಜಾ ಪರಿವರ್ತನಾ ವೇದಿಕೆಯ ಸಿ.ಎಂ.ಕೃಷ್ಣಮೂರ್ತಿ ಅವರು ನೌಕರರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ, ಸರ್ಕಾರದ ನಿಲುವು ಖಂಡಿಸಿ ಮಾತನಾಡಿದರು.

ಪ್ರತಿಭಟನಾ ಸ್ಥಳಕ್ಕೆ ಬಂದ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಗೂಡೂರು ಭೀಮಸೇನಾ ಅವರಿಗೆ ಪ್ರತಿಭಟನಕಾರರು ಮನವಿ ಸಲ್ಲಿಸಿದರು.

ನೌಕರರ ಕೂಟದ ನಾಗೇಂದ್ರಸ್ವಾಮಿ, ರೈತ ಸಂಘದ ಮಹದೇವಸ್ವಾಮಿ, ಮಾಡ್ರಳ್ಳಿ ಮಹದೇವಪ್ಪ, ಬಿಎಸ್ಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ನಾಗಯ್ಯ, ಪ್ರಗತಿಪರ ಸಂಘಟನೆಗಳ ಮುಖಂಡ ಕೆ.ಎಂ.ನಾಗರಾಜು, ಸಾರಿಗೆ ನೌಕರರಾದ ಮಹದೇವ್ ಎಂ.ನಂಜುಂಡಸ್ವಾಮಿ, ಜಗದೀಶ್, ನಾಗೇಂದ್ರ, ವೀರಾರಾಜೇ ಅರಸ್, ರಮೇಶ್, ಶಿವಕುಮಾರ್, ಕುರಣೇಶ್, ಸಂಪತ್ತು ಇತರರು ಇದ್ದರು.

149 ಬಸ್ಗಳ ಸಂಚಾರ, ಎರಡು ಬಸ್ಗಳಿಗೆ ಕಲ್ಲು

ಈ ಮಧ್ಯೆ, ನೌಕರರ ಮುಷ್ಕರ ಐದನೇ ದಿನ ಮುಂದುವರಿದಿದ್ದರೂ, ಕೆಎಸ್ಆರ್ಟಿಸಿಯ ಚಾಮರಾಜನಗರ ವಿಭಾಗದಲ್ಲಿ ಸೋಮವಾರ 300ಕ್ಕೂ ಹೆಚ್ಚು ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದು, 149 ಬಸ್ಗಳು ಓಡಾಟ ನಡೆಸಿವೆ.

ಕರ್ತವ್ಯ ನಿರತ ಸಿಬ್ಬಂದಿಗೆ ಮುಷ್ಕರ ನಿರತ ನೌಕರರು ಅಡ್ಡಿ ಪಡಿಸಿರುವ ಪ್ರಕರಣಗಳೂ ವರದಿಯಾಗಿವೆ.

‘ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಎರಡು ಬಸ್ಗಳಿಗೆ ಕಲ್ಲಿ ತೂರಾಟ ನಡೆಸಲಾಗಿದೆ. ಸಂತೇಮರಹಳ್ಳಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರತ ಸಿಬ್ಬಂದಿಯನ್ನು ತಡೆದಿರುವ ಕೆಲವು ನೌಕರರು ಅವರೊಂದಿಗೆ ಜಗಳವಾಡಿದ್ದಾರೆ’ ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ ಬಿ. ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಕರ್ತವ್ಯಕ್ಕೆ ಹಾಜರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ನಮ್ಮಲ್ಲಿರುವ ಒಟ್ಟು ಬಸ್ಗಳ ಪೈಕಿ ಶೇ 25ರಷ್ಟು ಬಸ್ಗಳು ಸೋಮವಾರ ಕಾರ್ಯಾಚರಿಸಿವೆ. 300ಕ್ಕೂ ಹೆಚ್ಚು ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬಸ್ಗಳ ಮೇಲೆ ಕಲ್ಲೆಸೆದಿರುವವರ ಹಾಗೂ ಕರ್ತವ್ಯಕ್ಕೆ ಅಡ್ಡಿ ಪಡಿಸುವವರ ವಿರುದ್ಧ ಠಾಣೆಯಲ್ಲಿ ದೂರು ನೀಡಲು ಸೂಚಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.