ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸ್ಟೆಲ್‌ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಪ್ರತಿಭಟನೆ

Last Updated 12 ನವೆಂಬರ್ 2019, 17:05 IST
ಅಕ್ಷರ ಗಾತ್ರ

ಚಾಮರಾಜನಗರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಪದವಿ ವಿದ್ಯಾರ್ಥಿನಿಲಯದಲ್ಲಿನ ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸಬೇಕು ಎಂದು ಆಗ್ರಹಿಸಿ ಇಲ್ಲಿನ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯದ ಮುಂಭಾಗ ಭಿತ್ತಿ ಪತ್ರಗಳನ್ನು ಹಿಡಿದು ಮಂಗಳವಾರ ಪ್ರತಿಭಟನೆ ನಡೆಸಿದರು.

ಎಸ್‌ಸಿಎಸ್‌ಟಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ವಿಶ್ವ ವಿದ್ಯಾನಿಲಯ ಕಟ್ಟಡ ನಿರ್ಮಿಸಿದೆ ಆದರೆ, ನಿಲಯದ ಕಟ್ಟಡ ಸೋರಿಕೆಯಾಗುತ್ತಿದೆ. ದಿನಪತ್ರಿಕೆ ಓದಲು, ಕುಳಿತು ಅಧ್ಯಯನ ನಡೆಸಲು ಸಮರ್ಪಕವಾದ ಗ್ರಂಥಾಲಯ ಇಲ್ಲ. ನಮಗೆ ಕಳಪೆ ಆಹಾರ ನೀಡಲಾಗುತ್ತಿದೆ ಒಟ್ಟಾರೆ ವಿದ್ಯಾರ್ಥಿ ನಿಲಯದಲ್ಲಿ ಸಾಕಷ್ಟುಸಮಸ್ಯೆಗಳು ಎದುರಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಹಾಸ್ಟೆಲ್‌ ಸಮಸ್ಯೆ ಬಗ್ಗೆ ಈಗಾಗಲೇ ಅನೇಕಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಯಾವುದೇ ಕ್ರಮವಹಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಾಸ್ಟೆಲ್‌ ಕಟ್ಟಡ ದುರಸ್ತಿಗೊಳಿಸಬೇಕು. ಉತ್ತಮ ಗುಣಮಟ್ಟದ ಆಹಾರ ನೀಡಬೇಕು. ಗ್ರಂಥಾಲಯದಲ್ಲಿನ ಸಮಸ್ಯೆಗಳನ್ನು ಬಗೆಹರಿಸಬೇಕು. ಸೋಲಾರ್‌ ಸರಿಪಡಿಸಬೇಕು ಮತ್ತು ಕಟ್ಟಡಕ್ಕೆ ಯುಪಿಎಸ್‌ ಅಳವಡಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟರು.

ನಮ್ಮ ಸಮಸ್ಯೆಗಳನ್ನು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಗಳು ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT