ಚಾಮರಾಜನಗರ: ರಾಜ್ಯದಾದ್ಯಂತ ಸಂಪೂರ್ಣವಾಗಿ ಮದ್ಯಪಾನವನ್ನು ನಿಷೇಧ ಮಾಡವಂತೆ ಆಗ್ರಹಿಸಿ ಕೆಆರ್‌ಎಸ್ ಪಕ್ಷದ ಪದಾಧಿಕಾರಿಗಳು ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿದರು.
ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸೇರಿದ ಪ್ರತಿಭಟನಕಾರರು ಅಲ್ಲಿಂದ ಭುವನೇಶ್ವರಿ ವೃತ್ತ, ಬಿ. ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಧರಣಿ ನಡೆಸಿದರು.
ಬಳಿಕ ಶಿರಸ್ತೆದಾರ್ ರಂಗರಾಜು ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಕೆಆರ್‌ಎಸ್ ಪಕ್ಷದ ಜಿಲ್ಲಾಧ್ಯಕ್ಷ ಗಣೇಶ್, ಉಪಾಧ್ಯಕ್ಷ ಸೈಯದ್ ಸಮೀ, ಪ್ರಧಾನ ಕಾರ್ಯದರ್ಶಿ ಗಿರೀಶ್, ಕಾರ್ಯದರ್ಶಿಗಳಾದ ಶ್ರೀನಿವಾಸ್, ಜಯಶಂಕರ್, ಚಂದ್ರಶೇಖರ್, ಈಶ್ವರ್ ಇತರರು ಇದ್ದರು.