ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೀನ್‌ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ 25ಕ್ಕೆ

Published 23 ಮೇ 2023, 16:12 IST
Last Updated 23 ಮೇ 2023, 16:12 IST
ಅಕ್ಷರ ಗಾತ್ರ

ಚಾಮರಾಜನಗರ: ‘ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ನಿಂದಿಸಿರುವ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಡೀನ್ ಮತ್ತು ನಿರ್ದೇಶಕ ಡಾ.ಜಿ.ಎಂ.ಸಂಜೀವ್‌ ವಜಾಕ್ಕೆ ಆಗ್ರಹಿಸಿ, ಅಂಬೇಡ್ಕರ್‌ ಅನುಯಾಯಿಗಳ ಮಹಾ ಒಕ್ಕೂಟದಿಂದ ಗುರುವಾರ (ಮೇ.25) ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು’ ಎಂದು ಮಹಾನಾಯಕ ರಕ್ಷಣಾ ವೇದಿಕೆಯ ರಾಜ್ಯ ಉಪಾಧ್ಯಕ್ಷ, ವಕೀಲ ಪ್ರಸನ್ನಕುಮಾರ್ ಮಂಗಳವಾರ ಹೇಳಿದರು. 

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಗುರುವಾರ ಬೆಳಿಗ್ಗೆ 9 ಗಂಟೆಗೆ ನಗರದ ಅಂಬೇಡ್ಕರ್‌ ಭವನದಿಂದ ಜಿಲ್ಲಾಡಳಿತದಿಂದ ಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಜಿಲ್ಲೆ ಮಾತ್ರವಲ್ಲದೇ ಹೊರ ಜಿಲ್ಲೆಗಳ ಲಕ್ಷಕ್ಕೂ ಹೆಚ್ಚು ಅಂಬೇಡ್ಕರ್‌ ಅನುಯಾಯಿಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ’ ಎಂದರು. 

‘ಪ್ರತಿಭಟನೆಯನ್ನು ಹತ್ತಿಕ್ಕುವ ಉದ್ದೇಶದಿಂದ ಕೆಲವು ಕಿಡಿಗೇಡಿಗಳು, ಲಾಠಿ ಚಾರ್ಜ್‌ ಆಗಲಿದೆ. ಇದು ಡಾ.ಮಾರುತಿ ಮತ್ತು ಡಾ.ಸಂಜೀವ್ ನಡುವಿನ ಒಳಜಗಳ, ಬಿಜೆಪಿ ಸರ್ಕಾರದಲ್ಲಿ ನೇಮಕವಾಗಿದ್ದ ಡಾ.ಮಾರುತಿ ಅವರನ್ನು ಕಾಂಗ್ರೆಸ್ ಸರ್ಕಾರ ವರ್ಗಾವಣೆ ಮಾಡಲಿದೆ... ಮುಂತಾದ ವದಂತಿಗಳನ್ನು ಹರಡುತ್ತಿದ್ದಾರೆ. ಇಂತಹ ಮಾತುಗಳಿಗೆ ತಲೆ ಕೆಡಿಸಿಕೊಳ್ಳದೆ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು. 

ಪ್ರಕರಣ ವಜಾಗೊಳಿಸಿ: ‘ಡೀನ್ ವೈದ್ಯರು ಸೇರಿದಂತೆ 80 ಜನರ ವಿರುದ್ಧ ಹೂಡಿರುವ ಪ್ರಕರಣವನ್ನು ವಜಾಗೊಳಿಸಬೇಕು. ಈ ಘಟನೆ ದೊಡ್ಡಮಟ್ಟಕ್ಕೆ ಹೋಗದಂತೆ ಸರ್ಕಾರ ಕ್ರಮಕೈಗೊಳ್ಳಬೇಕು’ ಎಂದು ಪ್ರಸನ್ನಕುಮಾರ್ ಒತ್ತಾಯಿಸಿದರು.

ಮುಖಂಡ ನಲ್ಲೂರು ಮಹದೇವಸ್ವಾಮಿ, ಅಂಬೇಡ್ಕರ್ ಸೇನೆಯ ಅಧ್ಯಕ್ಷ ಗಣೇಶ್‌ಪ್ರಸಾದ್, ಜನ್ನೂರು-ಹೊಸೂರು ಪುಟ್ಟಬುದ್ದಿ, ಕೆ.ನಾಗರಾಜು, ಸಿದ್ದಾರ್ಥ ಇದ್ದರು.

ಛಲವಾದಿ ಮಹಾಸಭಾ ಬೆಂಬಲ

ಚಾಮರಾಜನಗರ: ಸಿಮ್ಸ್ ಡೀನ್ ಡಾ.ಜಿ.ಎಂ.ಸಂಜೀವ್‌ ವಿರುದ್ಧ ದಲಿತ ಪರ ಸಂಘಟನೆಗಳು ಗುರುವಾರ (ಮೇ 25) ನಗರದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ಛಲವಾದಿ ಮಹಾಸಭಾ ಜಿಲ್ಲಾ ಘಟಕ ಬೆಂಬಲ ನೀಡಿದೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ಜಿಲ್ಲಾ ಅಧ್ಯಕ್ಷ ಕೆ.ಆರ್.ನಾರಾಯಣ್ ‘ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿರುವ ಡೀನ್ ವಿರುದ್ಧ ಕ್ರಮಕೈಗೊಳ್ಳಬೇಕು. ಅವರ ಹೇಳಿಕೆಯನ್ನು ಮಹಾಸಭಾ ಖಂಡಿಸುತ್ತದೆ’ ಎಂದು ಹೇಳಿದರು.  ‘ನರ್ಸಿಂಗ್ ಬಾಲಕಿಯರ ಆಯ್ಕೆಯಲ್ಲಿ ದಲಿತ ಹೆಣ್ಣು ಮಕ್ಕಳಿಗೆ ಕಿರುಕುಳ ಆಸ್ಪತ್ರೆಯಲ್ಲಿ ಅಂಬೇಡ್ಕರ್ ಭಾವಚಿತ್ರ ಇಡುವ ಸಂದರ್ಭದಲ್ಲಿ ಪೊಲೀಸರನ್ನು ಕರೆಸಿ ದೌರ್ಜನ್ಯ ಮಾಡಿದ್ದಾರೆ. ಅಲ್ಲದೇ ಆಸ್ಪತ್ರೆ ಮುಂಭಾಗ ಆಟೊ ನಿಲ್ದಾಣದಲ್ಲಿ ಚಾಲಕರು ಅಂಬೇಡ್ಕರ್ ನಾಮಫಲಕ ಅಳವಡಿಸುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ’ ಎಂದು ದೂರಿದರು.  ಮುಖಂಡರಾದ ಎಲ್.ಮಹದೇವಯ್ಯ ಕುಮಾರ್ ಪರಮೇಶ್ ಗುರುಸ್ವಾಮಿ ಗಣೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT