ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ | ಜೋಡಿ ರಸ್ತೆ ಅವ್ಯವಸ್ಥೆ: ಅರೆಬೆತ್ತಲೆ ಪ್ರತಿಭಟನೆ

ಮಳೆ ನೀರು ನಿಲ್ಲದಂತೆ ಕ್ರಮ ವಹಿಸಲು ಆಗ್ರಹ, ಜಿಲ್ಲಾ ಬಂದ್‌ ಕರೆ ನೀಡುವ ಎಚ್ಚರಿಕೆ
Last Updated 20 ಅಕ್ಟೋಬರ್ 2022, 16:32 IST
ಅಕ್ಷರ ಗಾತ್ರ

ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿ ಮಳೆನೀರು ನಿಲ್ಲದಂತೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಸೇನಾಪಡೆಯ ಕಾರ್ಯಕರ್ತರು ನಗರದಲ್ಲಿ ಗುರುವಾರ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

ನಗರದ ಜೋಡಿ ರಸ್ತೆಯ ಜಿಲ್ಲಾಡಳಿತ ಗೇಟಿನ ಮುಂಭಾಗ ಸೇರಿದ ಪ್ರತಿಭಟನಕಾರರು ಸರ್ಕಾರ ಜಿಲ್ಲಾಡಳಿತದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 15 ದಿನಗಳ ಒಳಗೆ ಅವ್ಯವಸ್ಥೆ ಸರಿ ಮಾಡದಿದ್ದರೆ ಚಾಮರಾಜನಗರ ಬಂದ್‌ಗೆ ಕರೆ ನೀಡುವುದಾಗಿ ಎಚ್ಚರಿಸಿದರು.

ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ,‘ಜೋಡಿರಸ್ತೆಯನ್ನು ಅವೈಜ್ಞಾನಿವಾಗಿ ನಿರ್ಮಾಣ ಮಾಡಿರುವ ಕಾರಣದಿಂದ ಮಳೆ ಬಂದರೆ ಈ ರಸ್ತೆಯು ಮುಳುಗಡೆಯಾಗಿ ಸಂಚಾರಕ್ಕೆ ತುಂಬಾ ತೊಂದರೆ ಉಂಟಾಗುತ್ತದೆ. ಅಲ್ಲದೆ ಬಾಬುಜಗಜೀವನರಾಂ ಬಡಾವಣೆ, ಸೋಮಣ್ಣ ಲೇಔಟ್ , ರೈಲ್ವೆ ಬಡಾವಣೆ , ಇತರ ಬಡಾವಣೆ ಜಲಾವೃತಗೊಂಡು ನಿವಾಸಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಜಿಲ್ಲಾಡಳಿತ ಕಣ್ಣುಮುಚ್ಚಿ ಕುಳಿತಿದೆ’ ಎಂದು ಆರೋಪಿಸಿದರು.

ಶಾ.ಮುರಳಿ, ಪಣ್ಯದಹುಂಡಿ ರಾಜು, ನಿಜಧ್ವನಿಗೋವಿಂದರಾಜು, ಮರಿಯಾಲದಹುಂಡಿ ಕುಮಾರ್, ಕೆ.ಎಂ.ನಾಗರಾಜು, ಗು.ಪುರುಷೋತ್ತಮ್, ಗಡಿನಾಡು ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಚಾ.ರಾ.ಕುಮಾರ್, ನಂಜುಂಡಶೆಟ್ಟಿ, ಚಾ.ಸಿ.ಗುರುಸ್ವಾಮಿ, ಆಕಾಶ್ ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT