ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

Last Updated 12 ಡಿಸೆಂಬರ್ 2019, 17:30 IST
ಅಕ್ಷರ ಗಾತ್ರ

ಚಾಮರಾಜನಗರ: ಡಾ. ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ, ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಮಾಯಿಸಿದಕಾರ್ಯಕರ್ತರುಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌. ಆನಂದ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿರುವ ಕನ್ನಡಗರಿಗೆ ಕೇಂದ್ರ ಅಥವಾ ರಾಜ್ಯ ಸರ್ಕಾರದಲ್ಲಿಯಾವುದೇ ಉದ್ಯೋಗ ಸಿಗುತ್ತಿಲ್ಲ. ಉದ್ಯೋಗ ಮೀಸಲಾತಿ ದೊರೆಯುತ್ತಿಲ್ಲ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗಿದೆ.ಕರ್ನಾಟಕದಲ್ಲಿ ಆಡಳಿತ ಭಾಷೆ ಕನ್ನಡವಾಗಿದ್ದರೂ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಕಡತಗಳು, ಕನ್ನಡದಲ್ಲಿ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ ಎಂದು ಆರೋಪಿಸಿದರು.

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆ ಆಗುತ್ತಿಲ್ಲ. ಅನ್ಯ ಭಾಷೆಗಳ ಹಾವಳಿಯ ದುಷ್ಪರಿಣಾಮ ಕನ್ನಡ ಭಾಷೆ ಸಮರ್ಪಕವಾಗಿ ಬಳಕೆ ಆಗುತ್ತಿಲ್ಲ. ಇದರಿಂದ ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಧಕ್ಕೆ ಉಂಟಾಗಿದೆ.

ರಾಜ್ಯದಲ್ಲಿ ವಾಸಿಸುತ್ತಿರುವ ಕನ್ನಡಗರಿಗೆ ಕನ್ನಡ ಭಾಷೆಗೆ, ಸಾಮಾಜಿಕ ನ್ಯಾಯ ದೊರಕಬೇಕಾದರೆ ರಾಜ್ಯ ಸರ್ಕಾರದ ಡಾ. ಸರೋಜಿನಿ ಮಹಿಷಿ ವರದಿಯನ್ನುಕಡ್ಡಾಯವಾಗಿ ಜಾರಿಗೆ ತರುವ ಅಗತ್ಯವಿದೆ ಎಂದು ಮನವಿ ಮಾಡಿದರು.

ಸರೋಜಿನಿ ಅವರು ಲೋಸಸಭಾ ಸದಸ್ಯರಾಗಿದ್ದ ಸಂದರ್ಭದಲ್ಲಿ ರಾಜ್ಯದಾದ್ಯಂತಅಧ್ಯಯನ ಮಾಡಿ ಆಯೋಗಕ್ಕೆ ವರದಿ ಸಲ್ಲಿಸಿದ್ದರು.

ಆದರೂ ಈವರೆಗೆ ಆಡಳಿತ ನಡೆಸಿದ ಸರ್ಕಾರಗಳಿಗೆಕನ್ನಡಿಗರ ಮೇಲಿನ ಇಚ್ಚಾಶಕ್ತಿ ಕೊರತೆಯಿಂದ ಜಾರಿಗೆ ತರುವಲ್ಲಿ ವಿಫಲವಾಗಿವೆ.

ಈಗಿನ ರಾಜ್ಯ ಸರ್ಕಾರ ಕನ್ನಡಿಗರ ಹಿತದೃಷ್ಠಿಯಿಂದ ಡಾ. ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತರಬೇಕು ಇಲ್ಲವಾದರೆಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಕುಮಾರ್, ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ. ಶ್ರೀನಿವಾಸಗೌಡ, ಕರ್ನಾಟಕ ಕನ್ನಡ ರಕ್ಷಣಾವೇದಿಕೆಯ ಅಧ್ಯಕ್ಷ ಚಾ.ಗು. ನಾಗರಾಜು ಅಂಬರೀಶ್, ಸಿದ್ದಾರ್ಥ, ಮಂಜುನಾಥ್, ಶಂಕರ್, ಸ್ವಾಮಿ, ಮರಪ್ಪ, ಮಲ್ಲೇಶ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT