ಸಂತೇಮರಹಳ್ಳಿ: ‘ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ರಾಜ್ಯ ಸರ್ಕಾರ ಸರಿಪಡಿಸಬೇಕು ಎಂದು ಒತ್ತಾಯಿಸಿ ಬಲಗೈ ಸಮುದಾಯದವರು ಇಲ್ಲಿನ ಬಸ್ ನಿಲ್ದಾಣದಲ್ಲಿ ಮಂಗಳವಾರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಿಂದ ಮೆರವಣಿಗೆ ಹೊರಟ ಪ್ರತಿಭಟನಕಾರರು ಹೆದ್ದಾರಿ ತಡೆದು ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಬಲಗೈ ಸಮುದಾಯದ ಸಚಿವರಿಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ನಿವೃತ್ತ ನ್ಯಾ. ನಾಗಮೋಹನ್ ದಾಸ್ ವರದಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಜಾರಿ ಮಾಡಿರುವ ಕಾಯ್ದೆಯಲ್ಲಿ ಪರಿಶಿಷ್ಟ ಜಾತಿಗಳನ್ನು 3 ಗುಂಪುಗಳಾಗಿ ವಿಂಗಡಿಸಲಾಗಿದೆ. ಬಲಗೈ ಸಮುದಾಯವನ್ನು ಬಿ ಗುಂಪಿಗೆ ಸೇರಿಸಿ ರೋಸ್ಟರ್ ಬಿಂದುವನಲ್ಲಿ 9ನೇ ಸ್ಥಾನಕ್ಕೆ ಇಳಿಸಲಾಗಿದೆ. ಇದರಿಂದ ಬಲಗೈ ಸಂಬಂಧಿತ ಜಾತಿಗಳಿಗೆ ಅನ್ಯಾಯವಾಗಿದೆ. ಸರ್ಕಾರಿ ನೇಮಕಾತಿಯಲ್ಲಿ ಉದ್ಯೋಗಗಳನ್ನು ನೇಮಕ ಮಾಡಿದಾಗ ಬಲಗೈ ಸಂಬಂಧಿತ ಜಾತಿಗಳಿಗೆ ಯಾವುದೇ ಉದ್ಯೋಗ ದೊರಕುವುದಿಲ್ಲ. ಉನ್ನತ ಶಿಕ್ಷಣ ಪ್ರವೇಶಾತಿ, ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಬಡ್ತಿಯಲ್ಲಿಯೂ ಅವಕಾಶ ಸಿಗುವುದಿಲ್ಲ. ಹಾಗಾಗೀ ಸರ್ಕಾರ ಇಂತಹ ಅವೈಜ್ಞಾನಿಕ ಪರಿಶಿಷ್ಟ ಜಾತಿಗಳ ಕಾಯ್ದೆಯನ್ನು ತಿರಸ್ಕರಿಸಬೇಕು’ ಎಂದು ಆಗ್ರಹಿಸಿದರು.

ಬಲಗೈ ಸಮುದಾಯ ಪ್ರತಿನಿಧಿಸುವ ಸಚಿವರೇ ಸಮುದಾಯಕ್ಕೆ ಅನ್ಯಾಯ ಎಸಗಿದ್ದಾರೆ. ರಾಜ್ಯ ಸರ್ಕಾರ ಹೊಸದಾಗಿ ನೀಡುತ್ತಿರುವ ಜಾತಿ ಪ್ರಮಾಣಪತ್ರವನ್ನು ತುರ್ತಾಗಿ ನಿಲ್ಲಿಸಿ ಹಳೆ ಜಾತಿ ಪ್ರಮಾಣಪತ್ರವನ್ನು ಮುಂದುವರಿಸಬೇಕು. ಒಳ ಮೀಸಲಾತಿಗೆ ಅನ್ವಯಿಸುವ ರೋಸ್ಟರ್ ಬಿಂದುವನ್ನು ಪರಿಷ್ಕರಿಸಿ ಆಗಿರುವ ನ್ಯಾಯವನ್ನು ಸರಿಪಡಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಮಹಾನಾಯಕ ಸೇವಾ ಟ್ರಸ್ಟ್ ಅಧ್ಯಕ್ಷ ಶಿವನಾಗಣ್ಣ, ಮುಖಂಡರಾದ ಸಿ.ಎಂ.ಕೃಷ್ಣಮೂರ್ತಿ, ಮಾದೇಶ್, ಉಮ್ಮತ್ತೂರು ಸೋಮಣ್ಣ, ಕುದೇರು ಜಯಶಂಕರ್, ಶಿವಕುಮಾರ್, ಡಿ.ಪಿ.ರಾಜು, ರಾಜೇಂದ್ರ, ರಮೇಶ್, ಮಹೇಶ್, ಮಹದೇವಸ್ವಾಮಿ, ಕುಮಾರ, ಶಿವಣ್ಣ, ನಾಗರಾಜು, ಪಾರ್ವತಮ್ಮ, ಮೀನಾ, ಜಯಮ್ಮ, ರಾಜಮ್ಮ, ಶೈಲಜಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.