ಬುಧವಾರ, ಅಕ್ಟೋಬರ್ 20, 2021
23 °C

ಚಾಮರಾಜನಗರ: ಬಂದ್ ಬೆಂಬಲಿಸಿ ಕರ್ನಾಟಕ ಸೇನಾಪಡೆ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಭಾರತ ಬಂದ್ ಬೆಂಬಲಿಸಿ ಕರ್ನಾಟಕ ಸೇನಾಪಡೆಯ ಕಾರ್ಯಕರ್ತರು ನಗರದ ಚಮಾಲ್ ಬೀದಿಯಲ್ಲಿರುವ ಬಿಎಸ್‌ಎನ್‌ಎಲ್‌ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.

ಬೆಲೆ ಏರಿಕೆ, ಸರ್ಕಾರಿ ಸಂಸ್ಥೆಗಳ ಖಾಸಗೀಕರಣ ಹಾಗೂ ಕೃಷಿ ಕಾನೂನುಗಳನ್ನು ಖಂಡಿಸಿದ ಪ್ರತಿಭಟನಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. 

ಸೇನಾ ಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರು ಮಾತನಾಡಿ, ‘ಅನ್ನದಾತರು ದೇಶದಾದ್ಯಂತ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಭಾರತ ಬಂದ್‌ಗೆ ಕರೆಕೊಟ್ಟಿದ್ದಾರೆ. ಬಂದ್‌ ಅನ್ನು ನಮ್ಮ ಸಂಘಟನೆಯು ಸಂಪೂರ್ಣವಾಗಿ ಬೆಂಬಲಿಸುತ್ತದೆ’ ಎಂದರು.

‘ರೈತರ ಹೊಟ್ಟೆ ಮೇಲೆ ಹೊಡೆಯುವ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಬಡ ಕೃಷಿಕರನ್ನು ಲೆಕ್ಕಿಸದೆ ಬಂಡವಾಳ ಶಾಹಿಗಳಿಗೆ ಅನುಕೂಲ ಮಾಡಿಕೊಡಲು ಹೊರಟಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು. 

‘ಪೆಟ್ರೋಲ್, ಡೀಸೆಲ್‌, ಅಡುಗೆಎಣ್ಣೆ, ಅಡುಗೆ ಅನಿಲ ಸೇರಿದಂತೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಗನನಕ್ಕೆರಿದೆ. ಪ್ರಧಾನಿ ನರೇಂದ್ರಮೋದಿ ಅವರು ಚುನಾವಣೆ ಸಂದರ್ಭದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು. ಆದರೆ, ಎಲ್ಲ ಕ್ಷೇತ್ರಗಳನ್ನು ಖಾಸಗೀಕರಣಗೊಳಿಸುವ ಮೂಲಕ ಇರುವ ಉದ್ಯೋಗವನ್ನು ಕಿತ್ತುಕೊಳ್ಳುತ್ತಿದ್ದಾರೆ. ಆ ಮೂಲಕ ವಿದ್ಯಾರ್ಥಿಗಳ ಜೀವನದ ಮೇಲೆ ಚೆಲ್ಲಾಟ ಆಡುತ್ತಿದ್ದಾರೆ’ ಎಂದು ಅವರು ದೂರಿದರು. 

ನಮ್ಮನೆ ಪ್ರಶಾಂತ್, ನಿಜಧ್ವನಿಗೋವಿಂದರಾಜು, ಪಣ್ಯದಹುಂಡಿ ರಾಜು,  ಗಡಿನಾಡು ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ  ಚಾ.ರಾ.ಕುಮಾರ್, ಅರುಣ್ ಕುಮಾರ್ ಗೌಡ, ತಾಂಡವಮೂರ್ತಿ, ವೀರಭದ್ರ, ಕಾರ್ತಿಕ್, ಲಿಂಗರಾಜು, ಸಿದ್ದೇಶ್ ಕುಮಾರ್, ಚಂದ್ರಕುಮಾರ್, ಆಟೊ ಅಭಿ, ಸೂರಿ ಇತರರು ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು