ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ

16 ಪರೀಕ್ಷಾ ಕೇಂದ್ರ, ಪರೀಕ್ಷೆ ಬರೆಯಲಿರುವ 6,535 ವಿದ್ಯಾರ್ಥಿಗಳು
Last Updated 17 ಜೂನ್ 2020, 16:51 IST
ಅಕ್ಷರ ಗಾತ್ರ

ಚಾಮರಾಜನಗರ: ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಜಿಲ್ಲೆಯ 16 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ನಡೆಯಲಿದ್ದು, ಪದವಿಪೂರ್ವ ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ.

ಹೊರ ಜಿಲ್ಲೆಯ 240 ವಿದ್ಯಾರ್ಥಿಗಳು ಸೇರಿದಂತೆ 6,535 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

‘ಕೋವಿಡ್-19 ತಡೆಗೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ಸೋಂಕು‌ ನಿವಾರಕ ಸಿಂಪಡಿಸಲಾಗಿದ್ದು, ವಿದ್ಯಾರ್ಥಿಗಳು, ಸಿಬ್ಬಂದಿಗೆ ಮಾಸ್ಕ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ನೀಡಲು ವ್ಯವಸ್ಥೆ ಮಾಡಲಾಗಿದೆ’ ಎಂದು ಪಿಯು ಇಲಾಖೆ ಉಪನಿರ್ದೇಶಕ ಡಿ.ಎಸ್.ಕೃಷ್ಣಮೂರ್ತಿ ‘ಪ್ರಜಾವಾಣಿ’ಗೆ ತಿಳಿಸಿದರು.

ಬಸ್ ಮಾರ್ಗ: ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಬರಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಬಸ್ ವ್ಯವಸ್ಥೆ ಮಾಡಲಾಗಿದೆ.

ಆರಂಭದಲ್ಲಿ‌ 16 ಬಸ್ ಮಾರ್ಗ‌ ನಕ್ಷೆ ಸಿದ್ಧಪಡಿಸಲಾಗಿತ್ತು. ಈಗ ಹೆಚ್ಚುವರಿಯಾಗಿ ನಾಲ್ಕು ‌ಮಾರ್ಗ ನಕ್ಷೆ ಸಿದ್ಧಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಬುಧವಾರ ಸಂಜೆ ಅಧಿಕಾರಿಗಳ ಸಭೆ ನಡೆಸಿ ಕೊನೆ ಹಂತದ ಸಿದ್ಧತೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರಲ್ಲದೇ, ಸಲಹೆ ಸೂಚನೆಗಳನ್ನು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT