ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಶೇ 96ರಷ್ಟು ಮಕ್ಕಳಿಗೆ ಪೋಲಿಯೊ ಲಸಿಕೆ

Last Updated 31 ಜನವರಿ 2021, 15:33 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಾದ್ಯಂತ ಭಾನುವಾರ ಪಲ್ಸ್‌ ಪೋಲಿಯೊ ಅಭಿಯಾನ ನಡೆಯಿತು.ನವಜಾತ ಶಿಶುವಿನಿಂದ ಹಿಡಿದು ಐದು ವರ್ಷದವರೆಗಿನ 65,986 ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲಾಯಿತು.

ಜಿಲ್ಲಾಸ್ಪತ್ರೆ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಎ.ಅಶ್ವಿನಿ, ಉಪಾಧ್ಯಕ್ಷೆ ಶಶಿಕಲಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್‌ ಭೊಯರ್‌ ನಾರಾಯಣರಾವ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ.ರವಿ ಅವರು ಅಭಿಯಾನಕ್ಕೆ ಚಾಲನೆ ನೀಡಿದರು.

ನಗರಸಭೆ ಅಧ್ಯಕ್ಷೆಆಶಾನಟರಾಜು, ಉಪಾಧ್ಯಕ್ಷೆ ಸುಧಾ, ರೋಟರಿ ಸಂಸ್ಥೆಯ ಅಧ್ಯಕ್ಷರಾದ ಪ್ರಕಾಶ್, ಆರ್.ಸಿ.ಎಚ್.ಅಧಿಕಾರಿ ಡಾ. ವಿಶ್ವೇಶ್ವರಯ್ಯ, ಜಿಲ್ಲಾಸ್ಪತ್ರೆ ಸ್ಥಾನಿಕ ವೈದ್ಯಾಧಿಕಾರಿ ಡಾ. ಕೃಷ್ಣಪ್ರಸಾದ್ ಇತರರು ಇದ್ದರು.

ಶೇ 96ರಷ್ಟು ಪ್ರಗತಿ: ಜಿಲ್ಲೆಯಲ್ಲಿ ಲಸಿಕೆ ಹಾಕುವುದಕ್ಕಾಗಿ 68,682 ಮಕ್ಕಳನ್ನು ಗುರುತಿಸಲಾಗಿತ್ತು. ಈ ಪೈಕಿ 65,986 ಮಕ್ಕಳಿಗೆ ಹಾಕುವ ಮೂಲಕ ಶೇ 96ರಷ್ಟು ಸಾಧನೆಯಾಗಿದೆ.

ಚಾಮರಾಜನಗರ ತಾಲ್ಲೂಕಿನಲ್ಲಿ 23,573 ಮಕ್ಕಳ ಪೈಕಿ 22,756 ಮಂದಿಗೆ (ಶೇ 97), ಗುಂಡ್ಲುಪೇಟೆಯಲ್ಲಿ 13,731 ಚಿಣ್ಣರ ಪೈಕಿ 13,224 ಮಂದಿಗೆ (ಶೇ 96), ಕೊಳ್ಳೇಗಾಲದಲ್ಲಿ 11,616 ಮಕ್ಕಳಲ್ಲಿ 11,380 ಮಕ್ಕಳಿಗೆ (ಶೇ 98), ಹನೂರಿನಲ್ಲಿ 13,736 ಮಕ್ಕಳ ಪೈಕಿ 12,761 ಮಂದಿಗೆ (ಶೇ 93) ಹಾಗೂ ಯಳಂದೂರು ತಾಲ್ಲೂಕಿನಲ್ಲಿ 6,026 ಮಕ್ಕಳ ಪೈಕಿ 5,865 ಚಿಣ್ಣರಿಗೆ (ಶೇ 97) ಪೋಲಿಯೊ ಲಸಿಕೆ ಹಾಕಲಾಗಿದೆ.

ಅಭಿಯಾನಕ್ಕಾಗಿ ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ವಿಶೇಷ ಬೂತ್‌ಗಳನ್ನು ಸ್ಥಾಪಿಸಲಾಗಿತ್ತು. ಗ್ರಾಮೀಣ ಭಾಗಗಳಲ್ಲಿ ಅಂಗನವಾಡಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿತ್ತು.

ವಿಳಂಬ, ಕಾದ ಜನ: ಭಾನುವಾರ ಬೆಳಿಗ್ಗೆ ಎಂಟು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ಲಸಿಕೆ ಹಾಕಲು ಸಮಯ ನಿಗದಿ ಪಡಿಸಲಾಗಿತ್ತು. ಆದರೆ, ಚಾಮರಾಜನಗರ ಸೇರಿದಂತೆ ಹಲವು ಕಡೆಗಳಲ್ಲಿ ಬೆಳಿಗ್ಗೆ ಎಂಟು ಗಂಟೆಗೆ ಅಭಿಯಾನ ಆರಂಭವಾಗಲಿಲ್ಲ. ಲಸಿಕೆಯನ್ನು ತೆಗೆದುಕೊಂಡು ಸಿಬ್ಬಂದಿ ಬರಲೇ ಇಲ್ಲ. ಬೆಳಿಗ್ಗೆಯೇ ಮಕ್ಕಳನ್ನು ಕರೆದುಕೊಂಡು ಬಂದಿದ್ದ ಪೋಷಕರು ಸ್ವಲ್ಪ ಹೊತ್ತು ಕಾಯಬೇಕಾಯಿತು. ಇನ್ನೂ ಕೆಲವರು ವಾಪಸ್‌ ಹೋದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT