ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ ಜ.31ರಂದು ಪಲ್ಸ್‌ ಪೋಲಿಯೊ ಕಾರ್ಯಕ್ರಮ

Last Updated 21 ಜನವರಿ 2021, 15:49 IST
ಅಕ್ಷರ ಗಾತ್ರ

ಚಾಮರಾಜನಗರ: ಪಲ್ಸ್ ಪೋಲಿಯೊ ಅಭಿಯಾನವು ಇದೇ 31ರಂದು ಜಿಲ್ಲೆಯಾದ್ಯಂತ ನಡೆಯಲಿದೆ.

ಬೆಳಿಗ್ಗೆ 8 ಗಂಟೆಯಿಂದ ಸಂಜೆ 5ರವರೆಗೆ ಜಿಲ್ಲೆಯಾದ್ಯಂತ ತೆರೆಯಲಾಗಿರುವ ಬೂತುಗಳಲ್ಲಿ ಪೋಲಿಯೊ ಲಸಿಕೆ ಹಾಕಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ.ಕಾರ್ಯಕ್ರಮ ನಿರ್ವಹಣೆಗಾಗಿ ಪ್ರತಿ ತಾಲ್ಲೂಕಿನಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಲಾಗಿದೆ.

ನವಜಾತ ಶಿಶುವಿನಿಂದ ಹಿಡಿದು ಐದು ವರ್ಷದ ಮಕ್ಕಳಿಗೆ ಲಸಿಕೆ ಹಾಕಲಿದ್ದು, ಜಿಲ್ಲೆಯಲ್ಲಿ 68,682 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.

ಚಾಮರಾಜನಗರ ತಾಲ್ಲೂಕಿನಲ್ಲಿ 23,573, ಗುಂಡ್ಲುಪೇಟೆ ತಾಲೂಕಿನಲ್ಲಿ 13,731, ಕೊಳ್ಳೇಗಾಲ ತಾಲೂಕಿನಲ್ಲಿ 25,352, ಯಳಂದೂರು ತಾಲೂಕಿನಲ್ಲಿ 6,026 ಮಕ್ಕಳಿಗೆ ಲಸಿಕೆ ಹಾಕಲು ಅಂದಾಜಿಸಲಾಗಿದೆ.

ಜಿಲ್ಲೆಯಲ್ಲಿ 619 ಪಲ್ಸ್ ಪೋಲಿಯೊ ಬೂತ್‌ಗಳನ್ನು ತೆರೆಯಲಾಗಿದ್ದು, ನಗರ ಪ್ರದೇಶಗಳಲ್ಲಿ 91, ಗ್ರಾಮೀಣ ಪ್ರದೇಶದಲ್ಲಿ 528 ಬೂತ್ ಕಾರ್ಯ ನಿರ್ವಹಿಸಲಿವೆ.

ಚಾಮರಾಜನಗರ ತಾಲ್ಲೂಕಿನಲ್ಲಿ 194, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 158, ಕೊಳ್ಳೇಗಾಲ ತಾಲೂಕಿನಲ್ಲಿ 223, ಯಳಂದೂರು ತಾಲ್ಲೂಕಿನಲ್ಲಿ 44 ಬೂತ್‌ಗಳನ್ನು ತೆರೆಯಲಾಗಿದೆ. ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ ಜಿಲ್ಲೆಯಾದ್ಯಂತ 124 ಮೇಲ್ವಿಚಾರಕರನ್ನು ಹಾಗೂ 2,572 ಲಸಿಕಾ ಕಾರ್ಯಕರ್ತರನ್ನು ನೇಮಿಸಲಾಗಿದೆ. 20 ಟ್ರ್ಯಾನ್ಸಿಟ್ ಬೂತ್‌ಗಳು ಹಾಗೂ ಎಂಟು ಸಂಚಾರಿ ಬೂತ್ ಗಳೂ ಸಹ ಇರಲಿವೆ.

ಮನೆ ಮನೆಗೆ ಭೇಟಿ:ಪಟ್ಟಣದಲ್ಲಿ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 31ರಂದು ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ. ಗ್ರಾಮಾಂತರ ಪ್ರದೇಶಗಳಲ್ಲಿ ಎರಡನೇ ಮತ್ತು ಮೂರನೇ ದಿನ ಮನೆ ಮನೆಗೆ ಭೇಟಿ ನೀಡಲಾಗುತ್ತದೆ ಹಾಗೂ ಪಟ್ಟಣ ಪ್ರದೇಶದಲ್ಲಿ ಎರಡನೇ ದಿನ, ಮೂರನೇ ದಿನ ಹಾಗೂ ನಾಲ್ಕನೇ ದಿನವೂ ಮನೆ ಮನೆ ಭೇಟಿ ನೀಡಿ ಲಸಿಕೆ ನೀಡುವ ಕಾರ್ಯಕ್ರಮವನ್ನು ನಡೆಸಲಾಗುವುದು. ಪಟ್ಟಣ ಪ್ರದೇಶದಲ್ಲಿ 38,164, ಗ್ರಾಮಾಂತರ ಪ್ರದೇಶ 2,05,955 ಸೇರಿದಂತೆ ಒಟ್ಟು 2,44,119 ಮನೆಗಳಿಗೆ ಭೇಟಿ ನೀಡಲಾಗುತ್ತದೆ.

ಪೋಷಕರು ಆಗ ತಾನೆ ಹುಟ್ಟಿದ ಮಗುವಿನಿಂದ 5 ವರ್ಷದವರೆಗಿನ ಎಲ್ಲ‌ ಮಕ್ಕಳಿಗೂ ಈ ಹಿಂದೆ ಎಷ್ಟೇ ಬಾರಿ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಿದ್ದರೂ 31ರಂದು ಲಸಿಕೆ ಹಾಕಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮನವಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT