ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಂತೇಮರಹಳ್ಳಿ: 3,044 ಮಕ್ಕಳಿಗೆ ಪೋಲಿಯೋ ಲಸಿಕೆ

Published 29 ಫೆಬ್ರುವರಿ 2024, 14:20 IST
Last Updated 29 ಫೆಬ್ರುವರಿ 2024, 14:20 IST
ಅಕ್ಷರ ಗಾತ್ರ

ಸಂತೇಮರಹಳ್ಳಿ: ‘ಮಾ.2 ರಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಯಶಸ್ವಿಗೊಳಿಸಲು ಆಸ್ಪತ್ರೆ ಸಿಬ್ಬಂದಿಗಳ ಶ್ರಮ ಮುಖ್ಯ’ ಎಂದು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ರೇಣುಕಾದೇವಿ ತಿಳಿಸಿದರು.

ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ ನಡೆದ ಪಲ್ಸ್ ಪೋಲಿಯೋ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಗೆ ಒಳಪಡುವ ಆಸ್ಪತ್ರೆಗಳಾದ ಕುದೇರು, ಉಮ್ಮತ್ತೂರು, ಹಳ್ಳಿಕೆರೆಹುಂಡಿ ಹಾಗೂ ಸಂತೇಮರಹಳ್ಳಿ ಸೇರಿದಂತೆ 4 ಆಸ್ಪತ್ರೆಗಳ ವ್ಯಾಪ್ತಿಯಲ್ಲಿ 5 ವರ್ಷಗಳ ಒಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಬೇಕು. ಈ ವ್ಯಾಪ್ತಿಯಲ್ಲಿ 3,044 ಮಕ್ಕಳಿದ್ದು, ಲಸಿಕೆ ಹಾಕಲು 33 ಬೂತ್‌ಗಳನ್ನು ಸ್ಥಾಪನೆ ಮಾಡಲಾಗಿದೆ. ಜತೆಗೆ 6 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ’ ಎಂದರು.

‘ನಿಗದಿತ ವೇಳೆಗೆ ಲಸಿಕೆ ಅಭಿಯಾನ ಆರಂಭವಾಗಬೇಕು. ಲಸಿಕೆ ಕಾರ್ಯಕ್ರಮದಲ್ಲಿ ಯಾವುದೇ ಲೋಪ ದೋಷವಾಗದಂತೆ ಸಿಬ್ಬಂದಿಗಳು ಎಚ್ಚರಿಕೆ ವಹಿಸಹಿಬೇಕು’ ಎಂದು ಸೂಚಿಸಿದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಗಿರಿಜಾ ಶಂಕರ್, ಸುರಕ್ಷತಾಧಿಕಾರಿ ಭವಾನಿ, ಪವಿತ್ರ, ರಾಜಮ್ಮ, ಲಾವಣ್ಯ, ರಾಜಮ್ಮ, ಗೀತಾ, ಮಂಜುಳಾ, ಶಿವಕುಮಾರ್, ಮಹಾಲಕ್ಷ್ಮಿ, ದೀಪಿಕಾ, ಭವ್ಯ, ಪ್ರಿಯಾದರ್ಶಿನಿ, ಶೃತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT