ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಭಾನುವಾರ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಚಾಮರಾಜನಗರ ತಾಲ್ಲೂಕಿನ ವೆಂಕಟಯ್ಯನ ಛತ್ರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಉದ್ಘಾಟನಾ ಸಮಾರಂಭವನ್ನು ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ಉದ್ಘಾಟಿಸಿದರು. ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಅಭಿಯಾನಕ್ಕೆ ವಿದ್ಯುಕ್ತ ಚಾಲನೆ ನೀಡಿದರು.

ಇದೇ ವೇಳೆ ಮಾತನಾಡಿ ಸಿಇಒ, ‘ದೇಶದಲ್ಲಿ ಪೋಲಿಯೊ ನಿರ್ಮೂಲನೆಯಾಗಿದ್ದರೂ, ಅಕ್ಕಪಕ್ಕದ ದೇಶಗಳಲ್ಲಿ ಪೋಲಿಯೊ ಪ್ರಕರಣಗಳು ಕಾಣಿಸಿಕೊಂಡಿರುವುದರಿಂದ ವೈರಸ್ ವಿರುದ್ಧ ಮುನ್ನೆಚ್ಚರಿಕೆ ವಹಿಸಲು ದೇಶದಲ್ಲೂ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವನ್ನು ವ್ಯಾಪಕವಾಗಿ ಹಮ್ಮಿಕೊಳ್ಳಲಾಗಿದೆ ಎಂದರು.

‘ಭಾನುವಾರ ಬೂತ್ಗಳಲ್ಲಿ ಪೋಲಿಯೋ ಲಸಿಕೆ ಹಾಕಲಾಗುವುದು. ಡಿ.22 ಹಾಗೂ 23ರಂದು ಮನೆಗಳಿಗೆ ಭೇಟಿ ನೀಡಿ ಲಸಿಕೆ ಹಾಕಲಾಗುವುದು. ಪೋಷಕರು ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಪೋಲಿಯೊ ಲಸಿಕೆ ಹಾಕಿಸಬೇಕು. ಭಾನುವಾರ ಲಸಿಕೆ ಹಾಕಿಸದಿದ್ದರೆ, ಮನೆಗಳಿಗೆ ಭೇಟಿ ನೀಡಿದಾಗ ತಪ್ಪದೆ ಲಸಿಕೆ ಹಾಕಿಸಬೇಕು’ ಎಂದು ಮನವಿ ಮಾಡಿದರು.

ಪ್ರಾಸ್ತವಿಕವಾಗಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ, ‘ಕಾರಾಣಾಂತರಗಳಿಂದ ಮಕ್ಕಳಿಗೆ ಬೂತ್ಗಳಲ್ಲಿ ಪೋಲಿಯೊ ಲಸಿಕೆ ಹಾಕಿಸಲು ಸಾಧ್ಯವಾಗದಿದ್ದರೆ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಬಂದಾಗ ಕಡ್ಡಾಯವಾಗಿ ಪೋಲಿಯೊ ಹನಿ ಹಾಕಿಸಬೇಕು. ಹಿಂದೆ ಎಷ್ಟೇ ಬಾರಿ ಪೋಲಿಯೊ ಲಸಿಕೆ ಕೊಡಿಸಿದ್ದರೂ, 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಲಸಿಕೆ ಕೊಡಿಸಬೇಕು ಎಂದು ಹೇಳಿದರು.

‘ಚಾಮರಾಜನಗರ ಜಿಲ್ಲೆಯಲ್ಲಿ 61,161 ಮಕ್ಕಳಿಗೆ ಪಲ್ಸ್ ಪೋಲಿಯೊ ಹನಿ ಹಾಕಲಾಗುತ್ತಿದೆ. 641 ಬೂತ್ ಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಶೇ51ರಷ್ಟು ಅರಣ್ಯ ಪ್ರದೇಶ ಇರುವುದರಿಂದ 30 ಪೋಡುಗಳನ್ನು ಗುರುತಿಸಿ ಲಸಿಕಾ ಅಭಿಯಾನ ಕೈಗೊಳ್ಳಲಾಗಿದೆ’ ಎಂದು ಡಿಎಚ್ಒ ತಿಳಿಸಿದರು.

ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ರಾಜೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್, ವೆಂಕಟಯ್ಯನಛತ್ರದ ಆರೋಗ್ಯ ಕೇಂದ್ರದ ಅಧಿಕಾರಿ ಡಾ. ಸತೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಾವಣ್ಯ, ಉಪಾಧ್ಯಕ್ಷ ಕೃಷ್ಣಮೂರ್ತಿ, ಸದಸ್ಯ ಜಯಲಕ್ಷ್ಮಿ, ಚಂದ್ರಮ್ಮ, ಶಿವಮಲ್ಲು, ಶೈಲಜಾ ಉಮೇಶ್, ಶೇಖರ್, ಸೋಮಣ್ಣ, ಆರೋಗ್ಯ ಇಲಾಖೆಯ ಚಂದ್ರಶೇಖರ್, ಲೆಕ್ಕ ವ್ಯವಸ್ಥಾಪಕ ಹೇಮಂತ್, ಕಾರ್ಯಕ್ರಮ ವ್ಯವಸ್ಥಾಪಕ ದುಷ್ಯಂತ್, ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.