ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ನಾಮಪತ್ರ ಸಲ್ಲಿಕೆ

Last Updated 17 ಏಪ್ರಿಲ್ 2023, 9:04 IST
ಅಕ್ಷರ ಗಾತ್ರ

ಚಾಮರಾಜನಗರ: ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಸೋಮವಾರ ನಾಮಪತ್ರ ಸಲ್ಲಿಸಿದರು.

ಸಾವಿರಾರು ಕಾರ್ಯಕರ್ತರೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಅವರು, ತಹಶೀಲ್ದಾರ್ ಕಚೇರಿಯಲ್ಲಿ ಚುನಾವಣಾಧಿಕಾರಿ ಯೋಗಾನಂದ ಅವರಿಗೆ ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮೊದಲು ನಗರದ ಕೊಳದ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪುಟ್ಟರಂಗಶೆಟ್ಟಿ, ಅಲ್ಲಿಂದ ಬೆಂಬಲಿಗರೊಂದಿಗೆ ಚಾಮರಾಜೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಅಲ್ಲಿಂದ ಸತ್ಯಮಂಗಲ ರಸ್ತೆಯಲ್ಲಿರುವ ಪಕ್ಷದ ಕಚೇರಿಗೆ ತೆರಳಿದರು. ಕಚೇರಿಯಿಂದ ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.

ಸತ್ಯಮಂಗಲ ರಸ್ತೆ, ಡೀವಿಯೇಷನ್ ರಸ್ತೆ, ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ತಹಶೀಲ್ದಾರ್ ಕಚೇರಿವರೆಗೂ ಮೆರವಣಿಗೆ ಸಾಗಿತು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT