ಸೋಮವಾರ, ಫೆಬ್ರವರಿ 24, 2020
19 °C

ಎಚ್ಚೆತ್ತ ಸೆಸ್ಕ್‌, ಟಿ.ಸಿ ಪರಿಸರ ಸ್ವಚ್ಛ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಳ್ಳೇಗಾಲ: ನಗರದ ವಿವಿಧ ಬಡಾವಣೆಗಳಲ್ಲಿ ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ವಿದ್ಯುತ್‌ ಪರಿವರ್ತಕಗಳ ಸುತ್ತಲಿನ ಪರಿಸರ ಸ್ವಚ್ಛಗೊಳಿಸಿ, ತಡೆ ಬೇಲಿ ನಿರ್ಮಿಸುವ ಕೆಲಸಕ್ಕೆ ಸೆಸ್ಕ್‌ ಸಿಬ್ಬಂದಿ ಮುಂದಾಗಿದ್ದಾರೆ.

ಜನವರಿ 27ರ ‘ಪ್ರಜಾವಾಣಿ’ ಸಂಚಿಕೆಯಲ್ಲಿ ‘ನಮ್ಮ ನಗರ ನಮ್ಮ ಧ್ವನಿ’ ಅಂಕಣದಲ್ಲಿ ‘ಅಪಾಯಕ್ಕೂ ಮುನ್ನ ಎಚ್ಚೆತ್ತುಕೊಳ್ಳುವುದೇ ಸೆಸ್ಕ್‌’ ಎಂಬ ವಿಶೇಷ ವರದಿ ಪ್ರಕಟವಾಗಿತ್ತು. ವಿದ್ಯುತ್‌ ಪರಿವರ್ತಕಳ ಸುತ್ತಲಿನ ಸುರಕ್ಷತಾ ಬೇಲಿ ಹಾಳಾಗಿರುವುದು, ತಂತಿಗಳು ಜೋತು ಬಿದ್ದಿರುವುದು, ಅವೈಜ್ಞಾನಿಕವಾಗಿ ವಿದ್ಯುತ್‌ ಕಂಬ ಅಳವಡಿಸಿದ್ದರಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ಬೆಳಕು ಚೆಲ್ಲಿತ್ತು. 

ವರದಿಗೆ ಸ್ಪಂದಿಸಿರುವ ಸೆಸ್ಕ್‌, ಕೆಲವು ವಿದ್ಯುತ್ ಪರಿವರ್ತಕಗಳ ಸುತ್ತಲೂ ಬೆಳೆದಿರುವ ಗಿಡ ಗಂಟಿಗಳು ಮತ್ತು ಅದರ ಸುತ್ತ ತಂತಿ ಬೇಲಿ ನಿರ್ಮಿಸಲು ಮುಂದಾಗಿದೆ. ಜೋತು ಬಿದ್ದಿರುವ ವಿದ್ಯುತ್ ತಂತಿಗಳನ್ನು ಸರಿ ಪಡಿಸುತ್ತಿದೆ.

‘ಪ್ರತಿ ಭಾನುವಾರದಂದು ಈ ಕಾರ್ಯಾಚರಣೆ ನಡೆಸಲಾಗುತ್ತದೆ. ಸಾರ್ವಜನಿಕರು ವಿದ್ಯುತ್‌ಗೆ ಸಂಬಂಧಪಟ್ಟ ಸಮಸ್ಯೆಗಳನ್ನು ನೇರವಾಗಿ ನಮಗೆ ತಿಳಿಸಿದರೆ ಕೂಡಲೇ ಸರಿಪಡಿಸಲಾಗುವುದು’ ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಲಿಂಗರಾಜು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು