ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲೆ ಸ್ವಚ್ಛತೆಗೆ ಮುಂದಾದ ಕಾವೇರಿ ನಿಗಮ

Last Updated 27 ಜುಲೈ 2021, 16:26 IST
ಅಕ್ಷರ ಗಾತ್ರ

ಕೊಳ್ಳೇಗಾಲ: ಇಲ್ಲಿನ ಬಸ್ತೀಪುರ ಬಡಾವಣೆಯ ಸಮೀಪದ ಕಬಿನಿ ನಾಲೆಯನ್ನು ಸ್ವಚ್ಛಗೊಳಿಸಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಮುಂದಾಗಿದ್ದಾರೆ.

ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಕಬಿನಿ ನಾಲೆಗಳಲ್ಲಿ ಗಿಡಗಂಟಿಗಳು ಬೆಳೆದಿದ್ದವು. ಹೂಳಿನ ಸಮಸ್ಯೆಯೂ ಇದರಿಂದ ನೀರು ಸರಾಗವಾಗಿ ಹರಿಯದೆ ಬೇರೆ ಕಡೆಗೆ ಸಾಗಿ ವ್ಯರ್ಥವಾಗುತ್ತಿತ್ತು.

ಈ ಬಗ್ಗೆ ‘ಪ್ರಜಾವಾಣಿ’ಯ ಜುಲೈ 25 ರ ಸಂಚಿಕೆಯಲ್ಲಿ ‘ದುರಸ್ತಿಯಾಗದ ನಾಲೆ; ಕೆರೆಗೆ ಹರಿಯದ ನೀರು’ ಎಂಬ ವಿಶೇಷ ವರದಿ ಪ್ರಕಟವಾಗಿತ್ತು.

ಈ ವರದಿಗೆ ಸ್ಪಂದಿಸಿರುವ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನಾಲೆಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು, ಹೂಳು ತೆರೆವುಗೊಳಿಸಲು ಆರಂಭಿಸಿದ್ದಾರೆ.

‘ನೀರಿನ ಪ್ರಮಾಣವನ್ನು ಕಡಿಮೆ ಮಾಡಿ ದಿನಕ್ಕೆ 1 ಕಿ.ಮೀನಂತೆ ನಾಲೆಯನ್ನು ಸ್ವಚ್ಛ ಮಾಡಲಾಗುತ್ತಿದೆ’ ನಿಗಮದ ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT