ಶನಿವಾರ, ಜುಲೈ 31, 2021
20 °C

ಪಾದಚಾರಿ ಮಾರ್ಗ ಒತ್ತುವರಿ ತೆರವಿಗೆ 3 ದಿನ ಗಡುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ನಗರಸಭೆ ವ್ಯಾಪ್ತಿಯ ಪ್ರಮುಖ ರಸ್ತೆಗಳ ಚರಂಡಿಗಳ ಸ್ಲ್ಯಾಬ್‌ಗಳು ಹಾಗೂ ಪಾದಚಾರಿ ಮಾರ್ಗಗಳ ಮೇಲೆ ವ್ಯಾಪಾರ ಮಾಡುತ್ತಿರುವವರು ವ್ಯಾಪಾರ ಸ್ಥಗಿತಗೊಳಿಸಿ, ಸಲಕರಣೆಗಳನ್ನು ತೆರವುಗೊಳಿಸುವಂತೆ ನಗರಸಭೆ ಸೂಚಿಸಿದೆ. ಇದಕ್ಕೆ ಮೂರು ದಿನಗಳ ಗಡುವು ನೀಡಿದೆ.

ನಗರದಲ್ಲಿ ಪಾದಚಾರಿ ಮಾರ್ಗಗಳು ಒತ್ತುವರಿಯಾಗಿರುವುದರಿಂದ ಜನರ ಓಡಾಟಕ್ಕೆ ತೊಂದರೆಯಾಗುತ್ತಿರುವುದರ ಬಗ್ಗೆ ಇದೇ 24ರ ‘ಪ್ರಜಾವಾಣಿ’ ಸಂಚಿಕೆಯ ‘ನಮ್ಮ ನಗರ ನಮ್ಮ ಧ್ವನಿ’ ಅಂಕಣದಲ್ಲಿ ಗಮನ ಸೆಳೆಯಲಾಗಿತ್ತು. 

ಜೊತೆಗೆ ಸ್ವಚ್ಛತೆ ಬಗ್ಗೆ ಇತ್ತೀಚೆಗೆ ಸಭೆ ನಡೆಸಿದ್ದ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರು, ಪಾದಚಾರಿ ಮಾರ್ಗಗಳ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳುವಂತೆ ನಗರಸಭೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. 

ಶುಕ್ರವಾರ ಪ್ರಕಟಣೆ ನೀಡಿರುವ ನಗರಸಭೆ ಆಯುಕ್ತ ಎಂ.ರಾಜಣ್ಣ ಅವರು, ‘ಪಾದಚಾರಿ ಮಾರ್ಗಗಳ ಮೇಲೆ ವ್ಯಾಪಾರ ಮಾಡುವ ಮಾರಾಟಗಾರರು ಮೂರು ದಿನಗಳ ಒಳಗಾಗಿ ವ್ಯಾಪಾರ ತೆರವುಗೊಳಿಸಬೇಕು. ತಪ್ಪಿದಲ್ಲಿ ನಗರಸಭೆ ಮತ್ತು ಪೊಲೀಸ್ ಇಲಾಖೆ ವತಿಯಿಂದ ತೆರವುಗೊಳಿಸಿ, ಸಾಮಗ್ರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಇದಕ್ಕೆ ನಗರಸಭೆಯಿಂದ ಯಾವುದೇ ರೀತಿಯ ಪರಿಹಾರವನ್ನು ನೀಡಲಾಗುವುದಿಲ್ಲ’ ಎಂದು ಎಚ್ಚರಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು