ಚಾಮರಾಜನಗರ: ದಿ.ಮಾಜಿ ಸಂಸದ ಆರ್.ಧ್ರುವ ನಾರಾಯಣ್ ರಾಜಕಾರಣದಲ್ಲಿ ಸರಳ, ಸಜ್ಜನಿಕೆಯ ಸಹಕಾರಮೂರ್ತಿಯಾಗಿದ್ದರು ಎಂದು ನಗರದ ನಳಂದ ವಿಶ್ವವಿದ್ಯಾಲಯದ ನಾಗಸೇನಾ ಬಂತೇಜಿ ಹೇಳಿದರು.

ನಗರದ ರೋಟರಿ ಭವನದಲ್ಲಿ ಆರ್.ಧ್ರುವ ನಾರಾಯಣ್ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಧ್ರುವ ನಾರಾಯಣ್ ಅವರ 3ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪಕ್ಷಾತೀತವಾಗಿ ಸರ್ವರಿಗೂ ಪ್ರಿಯರಾಗಿದ್ದ, ಸದಾ ಸಮಾಜಮುಖಿ ಕೆಲಸ ಮಾಡುತ್ತಿದ್ದ ಧೃವ ನಾರಾಯಣ್ ಶಾಸಕರಾಗಿ ಶಾಸಕರಾಗಿ, ಸಂಸದರಾಗಿ ಕ್ಷೇತ್ರಕ್ಕೆ ಉತ್ತಮ ಸೇವೆ ಸಲ್ಲಿಸಿದ್ದಾರೆ. ಈ ಮೂಲಕ ಇಂದಿಗೂ ಜನಮಾನಸದಲ್ಲಿ ಉಳಿದಿದ್ದಾರೆ ಎಂದರು.

ಕ್ರಿಯಾಶೀಲರಾಗಿದ್ದ ಧ್ರುವ ನಾರಾಯಣ್ ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.

ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಆರ್.ಧ್ರುವನಾರಾಯಣ್ ಕಾರ್ಯಕರ್ತರು, ಮುಖಂಡರೊಂದಿಗೆ ಬಾಂದವ್ಯದಿಂದ ಬೆರೆಯುತ್ತಿದ್ದರು. ಸದಾ ಹಸನ್ಮುಖಿ ರಾಜಕಾರಣಿಯಾಗಿ ಎಲ್ಲರೊಂದಿಗೂ ಪ್ರೀತಿ, ವಿಶ್ವಾಸದಿಂದ ಇರುತ್ತಿದ್ದರು. ಜನರ ಕಷ್ಟಗಳಿಗೆ ಮರುಗುತ್ತಿದ್ದ ರಾಜಕಾರಣಿಯಾಗಿದ್ದರು ಎಂದರು.

ಧ್ರುವ ನಾರಾಯಣ್ ಅವರ ಪಕ್ಷ ಸಂಘಟನೆ, ಶಿಸ್ತು ಪ್ರತಿಯೊಬ್ಬರಿಗೂ ಮಾದರಿ, ಅವರ ಆಡಳಿತಾವಧಿಯಲ್ಲಿ ಜಿಲ್ಲೆಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳು ಇಂದಿಗೂ ಸ್ಮರಣೀಯ ಎಂದರು.

ಆರ್ಥಿಕ ಸಹಾಯ: ಪುಣ್ಯಸ್ಮರಣೆ ಅಂಗವಾಗಿ ರೋಗಿಗಳಿಗೆ ಧ್ರುವ ನಾರಾಯಣ್ ಅವರ ಅಭಿಮಾನಿ ಬಳಗದ ವತಿಯಿಂದ ಡಯಾಲಿಸಿಸ್ಗೆ ಆರ್ಥಿಕ ಸಹಾಯ ಮಾಡಲಾಯಿತು.

ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಪಿ.ಸದಾಶಿವ ಮೂರ್ತಿ, ನಗರಸಭಾ ಮಾಜಿ ಅಧ್ಯಕ್ಷ ಚಿನ್ನಮ್ಮ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಬಿ.ಕೆ.ರವಿಕುಮಾರ್, ಕನಿಷ್ಠ ವೇತನಾ ಸಲಹಾ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಎಸ್ಪಿಕೆ, ಧ್ರುವ ನಾರಾಯಣ ಅಭಿಮಾನಿ ಬಳಗದ ಅಧ್ಯಕ್ಷ ಕಾಗಲವಾಡಿ ಚಂದ್ರು, ಉದ್ಯಮಿ ಶ್ರೀನಿಧಿ ಕುದರ್, ಚಿಕ್ಕಹೊಳೆ ಕುಮಾರ್, ಜಿ.ರಾಜಪ್ಪ, ನಾಗೇಂದ್ರ, ವಿನೋದ, ಚಿಕ್ಕಮಹದೇವ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.