ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಧ್ರುವನಾರಾಯಣ ಜನ್ಮದಿನ ಇಂದು - ವಿವಿಧ ಸೇವಾ ಕಾರ್ಯ

Last Updated 31 ಜುಲೈ 2022, 5:02 IST
ಅಕ್ಷರ ಗಾತ್ರ

ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣಅವರ 61ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಭಾನುವಾರ (ಜುಲೈ 31) ಅವರ ಅಭಿಮಾನಿ ಬಳಗದ ಆಶ್ರಯದಲ್ಲಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ವಿವಿಧ ಸೇವಾ ಕಾರ್ಯಕ್ರಮಗಳು ನಡೆಯಲಿವೆ.

ನಗರದ ರೈಲ್ವೆ ನಿಲ್ದಾಣದ ಬಳಿ ಇರುವ ಮಾಂಗಲ್ಯ ಕನ್ವೆನ್ಷನ್‌ ಹಾಲ್‌ನಲ್ಲಿ ಬೆಳಿಗ್ಗೆ 8ರಿಂದ ಮಧ್ಯಾಹ್ನ 2 ಗಂಟೆಯವರೆಗೆಬೃಹತ್ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಸರ್ವಧರ್ಮ ಗುರುಗಳು ಭಾಗವಹಿಸಲಿದ್ದಾರೆ.

ನಗರದ ಸಿದ್ದಮಲ್ಲೇಶ್ವರ ವಿರಕ್ತ ಮಠದ ಚನ್ನಬಸವಸ್ವಾಮೀಜಿ ಅವರು ಸಾನಿಧ್ಯವಹಿಸಲಿದ್ದಾರೆ. ಯಡಬೆಟ್ಟದಲ್ಲಿ ನಿರ್ಮಾಣ ಹಂತದಲ್ಲಿರುವ ನಳಂದ ಬೌದ್ಧ ವಿವಿಯ ಕಾರ್ಯದರ್ಶಿ ಬೋಧಿದತ್ತ ತೇರಾ ಬಂತೆ ಉದ್ಘಾಟಿಸಲಿದ್ದಾರೆ. ನಗರದ ಸಿಎಸ್‌ಪಿ ಚರ್ಚ್‌ ಧರ್ಮಗುರು ರೆ.ಪುಟ್ಟರಾಜು ಹಾಗೂ ಏಹಸಾನೀಯ ಅರಬ್ಬಿ ಕಾಲೇಜಿನ ಮೌಲ್ವಿ ಜನಾಬ್‌ ಮೌಲಾನ ಮೊಹಮ್ಮದ್‌ ಇಸ್ಮಾಯಿಲ್‌ ರಜ್ದಿ ಅವರು ಉಪಸ್ಥಿತರಿರಲಿದ್ದಾರೆ.

ಹುಟ್ಟುಹಬ್ಬದ ಅಂಗವಾಗಿ ಧ್ರುವನಾರಾಯಣ ಅವರ ಹುಟ್ಟೂರು ತಾಲ್ಲೂಕಿನ ಹೆಗ್ಗವಾಡಿಯ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ತಾಲ್ಲೂಕಿನ ಹೊಂಡರಬಾಳು ಬಳಿಯ ಕುಂಟುಗುಳಿ ಶಾಲೆಯಲ್ಲಿ ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಲಿದೆ.

ಕೊಳ್ಳೇಗಾಲದ ಯೂನಿಯನ್‌ ಕ್ಲಬ್‌ನಲ್ಲಿ ರಕ್ತದಾನ ಶಿಬಿರ ಹಾಗೂ ಕಣ್ಣಿನ ತಪಾಸಣಾ ಶಿಬಿರವನ್ನೂ ಅಭಿಮಾನಿಗಳು ಹಮ್ಮಿಕೊಂಡಿದ್ದಾರೆ. ಗುಂಡ್ಲುಪೇಟೆಯ ಪೃಥ್ವಿ ಬುದ್ಧಿಮಾಂದ್ಯ ಶಾಲಾ ಮಕ್ಕಳಿಗೆ ಊಟದ ವ್ಯವಸ್ಥೆ, ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯ ನಡೆಯಲಿದೆ. ಹನೂರು ತಾಲ್ಲೂಕಿನ ಕೌದಳ್ಳಿಯ ವೃದ್ಧಾಶ್ರಮ ವಾಸಿಗಳಿಗೆ ಊಟದ ವ್ಯವಸ್ಥೆಯೂ ಇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT