‘ಮಳೆಯಿಂದ ರಸ್ತೆಗಳಲ್ಲಿ ಉಂಟಾಗುವ ಗುಂಡಿಗಳನ್ನು ಶೀಘ್ರವಾಗಿ ಮುಚ್ಚುವ ಕೆಲಸ ಆಗಬೇಕು. ಇದರಿಂದ ಅಪಘಾತಗಳು ಕಡಿಮೆಯಾಗಿ ವಾಹನ ಸವಾರರಿಗೆ ಅನುಕೂಲವಾಗವಾಲಿದೆ. ನಗರದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ರಾಜಕಾಲುವೆ ಹಾಗೂ ಇತರೆ ಚರಂಡಿ ಮಾರ್ಗಗಳನ್ನು ಸ್ವಚ್ಛಗೊಳಿಸಲು ಕೂಡಲೇ ಕ್ರಮವಹಿಸಬೇಕು. ಕಟ್ಟಿಕೊಂಡಿರುವ ಚರಂಡಿಗಳಲ್ಲಿ ಹೂಳೆತ್ತಿಸಿ ಸ್ವಚ್ಚಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು. ‘ಜಿಲ್ಲೆಯಲ್ಲಿರುವ ಕ್ವಾರಿಗಳಲ್ಲಿ ನೀರು ನಿಲ್ಲುವುದರಿಂದ ಅವಘಡಗಳು ಜರುಗದಂತೆ ನೋಡಿಕೊಳ್ಳಬೇಕು. ಜನರು ಕ್ವಾರಿಯ ಸುತ್ತ ಒಡಾಡದಂತೆ ಬೇಲಿ ಮಾಡುವ ಕಾರ್ಯ ತ್ವರಿತಗತಿಯಲ್ಲಿ ಆಗಬೇಕು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಕ್ವಾರಿಗಳ ಉಸ್ತುವಾರಿಗೆ ತಾಲ್ಲೂಕು ಮಟ್ಟದ ನೋಡೆಲ್ ಅಧಿಕಾರಿಗಳನ್ನು ನೇಮಿಸಬೇಕು’ ಎಂದು ಹೇಳಿದರು.