ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಿಲ್ಲೆಯಲ್ಲಿ ಮುಂದುವರಿದ ಮಳೆ

Published : 9 ನವೆಂಬರ್ 2023, 16:31 IST
Last Updated : 9 ನವೆಂಬರ್ 2023, 16:31 IST
ಫಾಲೋ ಮಾಡಿ
Comments

ಚಾಮರಾಜನಗರ: ಜಿಲ್ಲೆಯಾದ್ಯಂತ ಗುರುವಾರ ರಾತ್ರಿ ಮಳೆಯಾಗಿದೆ.

ಗುಂಡ್ಲುಪೇಟೆ ಮತ್ತು ಚಾಮರಾಜನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದೆ. ಉಳಿದೆಡೆ ಸಾಧಾರಣವಾಗಿ ಮಳೆ ಬಿದ್ದಿದೆ. 

ಚಾಮರಾಜನಗರ ಮತ್ತು ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ರಾತ್ರಿ 12ರ ನಂತರ ಆರಂಭವಾಗಿ, ಮಳೆ ಮುಂಜಾವು 4 ಗಂಟೆಯವರೆಗೂ ಸುರಿದಿದೆ.

ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ 1.09 ಸೆಂ.ಮೀ ಮಳೆಯಾಗಿದೆ. ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 2.7 ಸೆಂ.ಮೀ ಮಳೆಯಾಗಿದ್ದರೆ, ಚಾಮರಾಜನಗರ ತಾಲ್ಲೂಕು ವ್ಯಾಪ್ತಿಯಲ್ಲಿ 1.49 ಸೆಂ.ಮೀ ಮಳೆ ಬಿದ್ದಿದೆ. 

ಯಳಂದೂರು ತಾಲ್ಲೂಕಿನಲ್ಲಿ 0.50 ಸೆಂ.ಮೀ, ಹನೂರಿನಲ್ಲಿ 0.18 ಸೆಂ.ಮೀ ಮಳೆಯಾಗಿದ್ದರೆ. ಕೊಳ್ಳೇಗಾಲ ತಾಲ್ಲೂಕಿನಲ್ಲಿ 0.05 ಸೆಂ.ಮೀನಷ್ಟು ಮಳೆಯಾಗಿದೆ.

ಚಾಮರಾಜನಗರದಲ್ಲಿ ರಾತ್ರಿ 12 ಗಂಟೆಯ ನಂತರ ಬಿರುಸಿನ ಮಳೆ ಬಿದ್ದಿದೆ. ಮುಂಜಾವಿನವರೆಗೂ ಬಿಟ್ಟು ಬಿಟ್ಟು ಮಳೆಯಾಗಿದೆ. 

ವಾರದಿಂದೀಚೆಗೆ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ಉಷ್ಣಾಂಶ ಇಳಿಮುಖವಾಗಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ ಆಸು ಪಾಸಿನಲ್ಲಿದೆ. ರಾತ್ರಿ ಹೊತ್ತು ಶೀತ ವಾತಾವರಣ ಕಂಡು ಬರುತ್ತಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT